ರಾಜ್ಯದಲ್ಲಿ ಸ್ವಂತ ಮನೆ ಇಲ್ಲದ ಬಡವರು ಮತ್ತು ಮಧ್ಯಮ ವರ್ಗದ ಕುಟುಂಬದ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ, ಹೌದು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಫಲಾನುಭವಿಗಳಿಗೆ ನಿಗಮದ ಯೋಜನೆ ಅಡಿಯಲ್ಲಿ ಸ್ವಂತ ಮನೆ ನೀಡುತ್ತಿದ್ದು 1BHK ಮತ್ತು 2BHK ಮನೆಗಳಿಗೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಫಲಾನುಭವಿಗಳು ಒಂದು ಲಕ್ಷ ರೂಪಾಯಿಯನ್ನ ಮೊದಲು ಪಾವತಿಸಬೇಕಾಗಿತ್ತು ಆದರೆ ಇದೀಗ ಆ ಹಣವನ್ನು ಸಹಿತ ಸರ್ಕಾರವೇ ಭರಿಸಲಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. . ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಮುಖ್ಯಮಂತ್ರಿಗಳ ವಸತಿ ಯೋಜನೆ
ಸಿಎಂ ಸಿದ್ದರಾಮಯ್ಯ (Siddaramaiah) ನವರು ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆ (CM 1 lakh Housing Scheme) ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಗುರುವಾರ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಪ್ರತಿ ಮನೆಗೆ ಒಂದು ಲಕ್ಷ ರೂಪಾಯಿಯಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದೆ.
2017 ರಲ್ಲಿ ಸೆಪ್ಟೆಂಬರ್ 23 ರಂದು ಮುಖ್ಯಮಂತ್ರಿಗಳ (chief minister) 1 ಲಕ್ಷ ಮನೆ ಯೋಜನೆಗೆ ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಿಗದಿಯಾಗಿತ್ತು. ನಂತರ ಬಿ. ಎಸ್. ಯಡಿಯೂರಪ್ಪ (B.S yadiyurappa) ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರ(BJP government)ದಲ್ಲಿ ಘಟಕ ವೆಚ್ಚ 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು.ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಂಡಿದ್ದರು.
ಅರ್ಜಿ ಸಲ್ಲಿಸಲು ಅರ್ಹತೆ ಏನು?
- ಅರ್ಜಿದಾರನಿಗೆ ಸ್ವಂತ ಮನೆ ಇರಬಾರದು.
- ಕರ್ನಾಟಕ ರಾಜ್ಯದ ನಾಗರಿಕರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
- ಬಿ.ಪಿ.ಎಲ್ ಕಾರ್ಡ್‌ದಾರರು ಮಾತ್ರ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರನು ಬೇರೆ ಯಾವುದೇ ವಸತಿ ಯೋಜನೆಯಡಿ ಪ್ರಯೋಜನ ಪಡೆದಿರಬಾರದು.
- ಕುಟುಂಬದ ವಾರ್ಷಿಕ ಆದಾಯವು ರೂ 87,000 ಕ್ಕಿಂತ ಕಡಿಮೆ ಇರಬೇಕು.
- ಅರ್ಜಿದಾರರು ಬೆಂಗಳೂರಿನಲ್ಲಿ ಕನಿಷ್ಟ 5 ವರ್ಷ / ಅದಕ್ಕಿಂತ ಹೆಚ್ಚು ವರ್ಷಗಳಿಂದ ವಾಸವಾಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ?
- ಆಧಾರ್ ಕಾರ್ಡ್. (Aadhar card)
- ವಾಸಸ್ಥಳದ ಪ್ರಮಾಣ ಪತ್ರ ( 5 ವರ್ಷಗಳಿಂದ ಬೆಂಗಳೂರಿನ ನಿವಾಸಿಯಾಗಿರುವ ಪತ್ರ )
- ಆದಾಯ ಪ್ರಮಾಣ ಪತ್ರ. (Income certificate)
ಪ್ರಮುಖ ಲಿಂಕುಗಳು
ಹೊಸ ಅರ್ಜಿ ಸಲ್ಲಿಸುವ ಲಿಂಕ್ : https://ashraya.karnataka.gov.in/cm_selection_flat/index.html
ನಿಗಮದ ವೆಬ್ ಸೈಟ್ ಲಿಂಕ್ : https://ashraya.karnataka.gov.in/
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




