ಕರ್ನಾಟಕ ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ನಾಗರಿಕರಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಕರ್ನಾಟಕ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಉಚಿತ ಮನೆ ಭಾಗ್ಯವನ್ನು ಒದಗಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜೀವ್ ಗಾಂಧಿ ವಸತಿ ಯೋಜನೆ – Rajiv Gandhi Housing scheme
ಕರ್ನಾಟಕ ಸರ್ಕಾರವು ಜನವರಿ 2000 ರಂದು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಪ್ರಾರಂಭಿಸಿತು, ರಾಜ್ಯದಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ದುರ್ಬಲ ಇರುವ ವರ್ಗದ ಫಲಾನುಭವಿಗಳಿಗೆ ವಸತಿ ಯೋಜನೆಗಳನ್ನು ಒದಗಿಸುತ್ತಾ ಬಂದಿದೆ. ಇದರಿಂದ ರಾಜ್ಯದ ಪ್ರತಿಯೊಬ್ಬ ನಾಗರಿಕರು ಸರ್ಕಾರದ ಈ ಯೋಜನೆಗಳ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಯೋಜನೆ ಜಾರಿಯಿಂದ ರಾಜ್ಯದಾದ್ಯಂತ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಕೈಗೆಟಕುವ ದರದಲ್ಲಿ ಮನೆಗಳನ್ನು ಒದಗಿಸಲಾಗುವುದು. ಈ ಯೋಜನೆಯು ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಉತ್ತೇಜಿಸುತ್ತದೆ. ಈ ಯೋಜನೆಯ ಮೂಲಕ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವೆಚ್ಚ-ಪರಿಣಾಮಕಾರಿ ಕಟ್ಟಡ ತಂತ್ರಜ್ಞಾನಗಳನ್ನು ಉತ್ತೇಜಿಸಲಾಗುತ್ತದೆ. ಈ ಯೋಜನೆಯು ಕರ್ನಾಟಕದ ನಾಗರಿಕರ ಜೀವನಮಟ್ಟವನ್ನು ಸುಧಾರಿಸುತ್ತದೆ.
ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು :
ಆಧಾರ್ ಕಾರ್ಡ್.
ಜಾತಿ ಪ್ರಮಾಣ ಪತ್ರ ಸಂಖ್ಯೆ.
ಕುಟುಂಬದ ಪಡಿತರ ಚೀಟಿ ಸಂಖ್ಯೆ.
ಕುಟುಂಬದ ಆದಾಯ ಪ್ರಮಾಣ ಪತ್ರ ಸಂಖ್ಯೆ.
ಬೆಂಗಳೂರು ನಗರ ಜಿಲ್ಲೆ, ವ್ಯಾಪ್ತಿಯಲ್ಲಿ ಕನಿಷ್ಠ 1 ವರ್ಷಕ್ಕಿಂತ ಮೇಲ್ಮಟ್ಟು ವಾಸವಾಗಿರುವ ವಾಸ ದೃಢೀಕರಣ ಪತ್ರ ಸಂಖ್ಯೆ.
ಬ್ಯಾಂಕ್ ಖಾತೆ ಸಂಖ್ಯೆ.
ದಿವ್ಯಾಂಗ ಚೇತನಗುರುತಿನ ಚೀಟಿ (ಸರ್ಕಾರದ ಅಧಿಕೃತ ಸಂಸ್ಥೆಯಿಂದ ನೀಡಲಾಗುವ ಗುರುತಿನ ಚೀಟಿ ).
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಮೊದಲಿಗೆ ಅರ್ಜಿಯನ್ನು ಸಲ್ಲಿಸಲು ಕರ್ನಾಟಕ ಸರ್ಕಾರದ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಮಂಡಳಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
https://ashraya.karnataka.gov.in/nannamane/index.aspx
ಹಂತ 2: ನಂತರ ಮುಖಪುಟದಲ್ಲಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ವಿಧಾನಸಭಾ ಕ್ಷೇತ್ರ ಹಾಗೂ ಪ್ರದೇಶವನ್ನು ಆಯ್ಕೆ ಮಾಡಿ, ನಂತರ ತಾಲೂಕು, ಹೋಬಳಿ ಹೀಗೆ ಕೇಳಲಾದ ಎಲ್ಲಾ ವಿವರಗಳನ್ನು ಆಯ್ಕೆ ಮಾಡಿ.
ಹಂತ 3: ನಂತರ ಆಧಾರ್ ನಂಬರ್ ಹಾಗೂ ಆಧಾರ್ ನಂಬರ್ ನಲ್ಲಿರುವಂತೆ ಹೆಸರು ಹಾಕಿ,ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಪಡೀತರ ಚೀಟಿ ನಂಬರ್ ಹಾಕಿ ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ
ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಬಹುದು :
ಕಛೇರಿ ವಿಳಾಸ: ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, 8/9ನೇ ಮಹಡಿ,
ಇ ಬ್ಲಾಕ್, ಕ.ಮಂ, ಕಟ್ಟಡ, ಕೆಂಪೇಗೌಡ ರಸ್ತೆ, ಬೆಂಗಳೂರು- 560 009.
ಫೋನ್ : 91-080-23118888
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ