ಬೆಂಗಳೂರು: ರಾಜ್ಯದ ಸಂಕಷ್ಟದಲ್ಲಿರುವ ಕಲಾವಿದರ ಮಾಸಾಶನವನ್ನು ಸರ್ಕಾರವು ₹2,000 ರಿಂದ ₹2,500 ಕ್ಕೆ ಹೆಚ್ಚಿಸುವ ನಿರ್ಣಯವನ್ನು ಅಧಿಕೃತವಾಗಿ ಘೋಷಿಸಿದೆ. ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಎಸ್. ಗೀತಾಬಾಯಿ ಅವರು ಆದೇಶವನ್ನು ಹೊರಡಿಸಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹಣದ ಹಂಚಿಕೆ: 2025-26ನೇ ಸಾಲಿನ ಬಜೆಟ್ ಶೀರ್ಷಿಕೆ 2205-00-102-1-18-251 ಅಡಿಯಲ್ಲಿ ₹4392.82 ಲಕ್ಷಗಳನ್ನು ನಿಗದಿ ಮಾಡಲಾಗಿದೆ. ಇದರಿಂದ, ಏಪ್ರಿಲ್ 2025 ರಿಂದ ಜೂನ್ 2025 ರವರೆಗಿನ ಮೊದಲ ಕಂತಿನ ₹10.98 ಕೋಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಿಗೆ ಬಿಡುಗಡೆ ಮಾಡಲಾಗಿದೆ.
ಬಜೆಟ್ ಘೋಷಣೆ: 2025-26ನೇ ಸಾಲಿನ ಆಯವ್ಯಯದಲ್ಲಿ (ಘೋಷಣೆ ಸಂಖ್ಯೆ-374), ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಕಲಾವಿದರ ಮಾಸಾಶನವನ್ನು ₹2,000 ರಿಂದ ₹2,500 ಕ್ಕೆ ಹೆಚ್ಚಿಸಲು ಸರ್ಕಾರವು ತಾತ್ವಿಕ ಒಪ್ಪಿಗೆ ನೀಡಿದೆ. ಈ ಹೆಚ್ಚಳವನ್ನು 09.04.2025ರ ಬಜೆಟ್ ಸೂಚನೆಯಲ್ಲಿ ಖಚಿತಪಡಿಸಲಾಗಿದೆ.
ಹಣದ ಬಳಕೆ: ಈ ಯೋಜನೆಗೆ ಒಟ್ಟು ₹40.76 ಕೋಟಿ ಬೇಕಾಗುತ್ತದೆ. ಇದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಕೋರಿದ್ದಾರೆ. ಸರ್ಕಾರವು ₹32.94 ಕೋಟಿಯನ್ನು ಮಂಜೂರಾತಿ ನೀಡಿದೆ.
ಷರತ್ತುಗಳು:
- ಬಿಡುಗಡೆಯಾದ ಹಣವನ್ನು ನಿಗದಿತ ಉದ್ದೇಶಕ್ಕೆ ಮಾತ್ರ ಬಳಸಬೇಕು.
- ಆದೇಶ ಜಾರಿಯಾದ ದಿನದಿಂದ ಇದು ಜಾರಿಗೆ ಬರುತ್ತದೆ.
- ಲೆಕ್ಕಪರಿಶೋಧಕರಿಂದ ದೃಢೀಕರಿಸಲ್ಪಟ್ಟ ಹಣದ ವೆಚ್ಚದ ವಿವರವನ್ನು ಸಲ್ಲಿಸಬೇಕು.
- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಕಾಯ್ದೆ (1999) ಮತ್ತು ನಿಯಮಗಳು (2000) ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಆರ್ಥಿಕ ಅನುಮೋದನೆ: ಈ ಆದೇಶವನ್ನು ಆರ್ಥಿಕ ಇಲಾಖೆಯ ಸಂಖ್ಯೆ ಎಫ್.ಡಿ 01 ಟಿ.ಎಎಫ್.ಪಿ 2025, ದಿನಾಂಕ 02.04.2025ರ ಪ್ರಕಾರ ಹೊರಡಿಸಲಾಗಿದೆ.


ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




