(Raman Kant Munjal Foundation Scholarship for Finance Students)
ಹೀರೋ ಗ್ರೂಪ್‌ನ “ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್” ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹಣಕಾಸು ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯವನ್ನು ನೀಡುತ್ತದೆ. 2025-26 ಶೈಕ್ಷಣಿಕ ವರ್ಷದಲ್ಲಿ ಫೈನಾನ್ಸ್ ಸಂಬಂಧಿತ ಪದವಿ ಕೋರ್ಸ್‌ಗಳಲ್ಲಿ (ಬಿಬಿಎ, ಬಿಎಫ್ಐಎ, ಬಿ.ಕಾಂ, ಬಿಎಮ್ಎಸ್, ಇತ್ಯಾದಿ) ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನವು ಲಭ್ಯವಿದೆ. ಅರ್ಜಿಗಳನ್ನು 30 ಜುಲೈ 2025 ರೊಳಗೆ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲುಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿವೇತನದ ಪ್ರಮಾಣ
ಆಯ್ಕೆಯಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹40,000 ರಿಂದ ₹5,50,000 ರವರೆಗೆ ಮೂರು ವರ್ಷಗಳವರೆಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಹತೆಗಳು
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಶೈಕ್ಷಣಿಕ ಅರ್ಹತೆ:
- 10 ಮತ್ತು 12ನೇ ತರಗತಿಯಲ್ಲಿ ಕನಿಷ್ಠ 80% ಅಂಕಗಳು (ಅಂಗವೈಕಲ್ಯ ವಿದ್ಯಾರ್ಥಿಗಳಿಗೆ 70%).
- ಹಣಕಾಸು ಸಂಬಂಧಿತ ಪದವಿ ಕೋರ್ಸ್‌ಗಳಲ್ಲಿ (ಬಿಬಿಎ, ಬಿಎಫ್ಐಎ, ಬಿ.ಕಾಂ, ಬಿಎಮ್ಎಸ್, ಇತ್ಯಾದಿ) ಪ್ರವೇಶ ಪಡೆದಿರಬೇಕು.
ಕುಟುಂಬದ ಆದಾಯ: ವಾರ್ಷಿಕ ಆದಾಯ ₹6 ಲಕ್ಷಕ್ಕಿಂತ ಕಡಿಮೆ ಇರಬೇಕು.
ಮುಖ್ಯ ನಿಬಂಧನೆ: ಹೀರೋ ಫಿನ್‌ಕಾರ್ಪ್ ಅಥವಾ ರಾಮನ್ ಕಾಂತ್ ಮುಂಜಾಲ್ ಫೌಂಡೇಶನ್ ನೊಂದಿಗೆ ಸಂಬಂಧಿಸಿದ ಉದ್ಯೋಗಿಗಳ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅರ್ಜಿ ಸಲ್ಲಿಸುವ ವಿಧಾನ
- ಆನ್‌ಲೈನ್ ಅರ್ಜಿ: ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕು. “Apply Now“
- ದಾಖಲೆಗಳು: 10ನೇ, 12ನೇ ಮಾರ್ಕ್‌ಶೀಟ್, ಪ್ರವೇಶ ಪತ್ರ, ಆದಾಯ ಪ್ರಮಾಣಪತ್ರ ಮತ್ತು ಇತರೆ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
- ಕೊನೆಯ ದಿನಾಂಕ: 30 ಜುಲೈ 2025.
ಆಯ್ಕೆ ಪ್ರಕ್ರಿಯೆ
ಮೊದಲ ಹಂತದಲ್ಲಿ ಶೈಕ್ಷಣಿಕ ಮಾನದಂಡಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಶೋಧಿಸಲಾಗುತ್ತದೆ. ನಂತರ, ವ್ಯಕ್ತಿತ್ವ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಅಂತಿಮ ಆಯ್ಕೆ ನಡೆಯುತ್ತದೆ. ಕೆಲವು ನಿಗದಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. Collage List
ಈ ವಿದ್ಯಾರ್ಥಿವೇತನವು ಹಣಕಾಸು ವಿಭಾಗದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವೃತ್ತಿ ಕನಸುಗಳನ್ನು ನನಸು ಮಾಡಲು ಸಹಾಯ ಮಾಡುತ್ತದೆ. ಅರ್ಹ ವಿದ್ಯಾರ್ಥಿಗಳು ತಡಮಾಡದೆ ಅರ್ಜಿ ಸಲ್ಲಿಸಿ!
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.