ration card

Ration card – 90 ಸಾವಿರ ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ತಿರಸ್ಕೃತ, ನಿಮ್ಮ ಅರ್ಜಿ ಸ್ಟೇಟಸ್ ಈಗಲೇ ಚೆಕ್ ಮಾಡಿ – ಇಲ್ಲಿದೆ ಡೈರೆಕ್ಟ್ ಲಿಂಕ್

WhatsApp Group Telegram Group

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ, ಕರ್ನಾಟಕ ಸರ್ಕಾರದಿಂದ ಮಧ್ಯೆ ರೇಷನ್ ಕಾರ್ಡ್ ತಿದ್ದುಪಡಿಗೆ ನಿನ್ನೆಯಿಂದ ಮತ್ತೆ ಅವಕಾಶ ಕೊಟ್ಟಿದ್ದಾರೆ, 15 ದಿನಗಳ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಹಾಕಿರುವ ಒಟ್ಟು ಮೂರು ಲಕ್ಷ ಅರ್ಜಿಗಳ ಪೈಕಿ ಸುಮಾರು 90 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಹಾಗಾಗಿ ಕೆಳಗಿನ ಕ್ರಮಗಳನ್ನು ಅನುಸರಿಸಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಸ್ಥಿತಿಯನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ರೇಷನ್ ಕಾರ್ಡ್ ತಿದ್ದುಪಡಿಯ ಸ್ಟೇಟಸ್ ಚೆಕ್ ಮಾಡುವ ವಿಧಾನ :

ಹಂತ 1: ಮೊದಲಿಗೆ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ : https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, ಇ- ಸ್ಟೇಟಸ್ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ, ಮುಂದುವರೆದು ಕೆಳಗೆ ಕಾಣುವ amendment requests ಮೇಲೆ ಕ್ಲಿಕ್ ಮಾಡಿ

01

ಹಂತ 3: ನಂತರ ನೀವು ಜಿಲ್ಲೆಗಳ ಹೆಸರುಗಳನ್ನು ಕಾಣಬಹುದು ಅದರಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ.

02

tel share transformed

ಹಂತ 5: ಮುಂದುವರೆದು ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಎಂಬ ಆಯ್ಕೆಯನ್ನು ಮಾಡಿಕೊಳ್ಳಿ

03

ಹಂತ 6: ಅಲ್ಲಿ ನಿಮ್ಮ ಪಡಿತರ ಚೀಟಿಯ ನಂಬರ್ ಅಥವಾ ಅಕ್ನೋಲೆಜ್ಮೆಂಟ್  ನಂಬರ್ ಹಾಕಿ, ನಂತರ ಕೆಳಗಡೆ ಕಾಣುವ go ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ.

05

ಹಂತ 7: ಮೇಲಿನ ಹಂತಗಳ ನಂತರ ಆಹಾರ ನಿರೀಕ್ಷಕರಿಂದ ಪ್ರತಿಕ್ರಿಯೆಗೆ ಕಾಯುತ್ತಿದೆ ಎಂದು ಬಂದರೆ, ತಿದ್ದುಪಡಿ ಇನ್ನೂ ಬಾಕಿ ಇದೆ ಎಂದರ್ಥ. ಒಂದು ವೇಳೆ ಕ್ಯಾನ್ಸಲ್ಡ್ ಬೈ ಸಿಸ್ಟಮ್ ಎಂದು ತೋರಿಸಿದರೆ ಅರ್ಜಿ ತಿರಸ್ಕಾರವಾಗಿದೆ ಎಂದರ್ಥ.

ರೇಷನ್ ಕಾರ್ಡ್ ಇದ್ದವರಿಗೆ ಆಹಾರ ಇಲಾಖೆ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿ ಗುಡ್ ನ್ಯೂಸ್ ಕೊಟ್ಟಿದೆ, ರೇಷನ್ ಕಾರ್ಡ್ ತಿದ್ದುಪಡಿಯ ನಿರೀಕ್ಷೆಯಲ್ಲಿದ್ದವರಿಗೆ ನಿನ್ನೆಯಿಂದ ಅವಕಾಶ ನೀಡಿದೆ. ಹೌದು ನಿನ್ನೆಯಿಂದ ಬರುವ 13ನೇ ತಾರೀಕಿನವರೆಗೂ ವಲಯವಾರು ತಿದ್ದುಪಡಿಗೆ ಅವಕಾಶ ನೀಡಿದ್ದು. ನಿಮ್ಮ ಹತ್ತಿರದ ರೇಷನ್ ಅಂಗಡಿ, ಆನ್ಲೈನ್ ಸೆಂಟರ್, ತಿದ್ದುಪಡಿ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Popular Categories