RATION CARD NOT CANCELLED

‘ಜಾತಿ‌ ಗಣತಿ’ ಸಮೀಕ್ಷೆ ವೇಳೆ ‘ರೇಷನ್ ಕಾರ್ಡ್’ ರದ್ದು ಮಾಡುವುದಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

Categories:
WhatsApp Group Telegram Group

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಸ್ಪಷ್ಟೀಕರಣ ನೀಡಿದೆ. ಕೆಲವು ಸಾರ್ವಜನಿಕರು ಸಮೀಕ್ಷೆ ನಡೆಸಲು ಬಂದವರು ತಮ್ಮ ಪಡಿತರ ಚೀಟಿ (Ration Card) ರದ್ದು ಮಾಡಲು ಬಂದಿದ್ದಾರೆ ಎಂಬ ತಪ್ಪು ಕಲ್ಪನೆಗೆ ಒಳಗಾಗಿ ಸರಿಯಾದ ಮಾಹಿತಿ ನೀಡಲು ನಿರಾಕರಿಸುತ್ತಿರುವುದು ಮತ್ತು ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಮೀಕ್ಷೆಯ ಉದ್ದೇಶ ಏನು?

ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ಅವರು ಈ ಕುರಿತು ಸ್ಪಷ್ಟಪಡಿಸಿದ್ದು, ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳು ಹಾಗೂ ಇತರೆ ಎಲ್ಲ ಜನರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ.

ಯಾವುದೇ ಕಾರಣಕ್ಕೂ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಈ ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಇರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸಲು, ಸೂಕ್ತ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ.

ಆದ್ದರಿಂದ, ಸಾರ್ವಜನಿಕರು ಈ ಸಮೀಕ್ಷೆಯ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೆ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories