ration card update 4

ಹೊಸ BPL & APL ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ, ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Telegram Group

ರಾಜ್ಯದ ಜನರಿಗೆ ರೇಷನ್ ಕಾರ್ಡ್ (Ration Card) ಸೌಲಭ್ಯ: ಹೊಸ ಅರ್ಜಿಗಳಿಗೆ ಅವಕಾಶ(opportunity to apply new applications)

ಅನ್ನಭಾಗ್ಯ (Annabhagya )ಮತ್ತು ಗೃಹಲಕ್ಷ್ಮಿ ಯೋಜನೆ(Gruha Lakshmi scheme) ಗಳು ಜನಸಾಮಾನ್ಯರಿಗೆ ಅತ್ಯಗತ್ಯವಾದ ಸೌಲಭ್ಯಗಳನ್ನು ಒದಗಿಸುವ ಕರ್ನಾಟಕ ಸರ್ಕಾರದ ಉಪಕ್ರಮಗಳು. ಈ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳಲು ಪಡಿತರ ಚೀಟಿ ಒಂದು ಪ್ರಮುಖ ದಾಖಲೆಯಾಗಿದೆ.ಅನ್ನಭಾಗ್ಯ  ಯೋಜನೆಯಡಿ, ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು ಉಚಿತವಾಗಿ ಅಕ್ಕಿ ಮತ್ತು ಇತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ, ಗೃಹಿಣಿರಿಗೆ ಪ್ರತಿ ತಿಂಗಳು ₹2000/- ನೀಡಲಾಗುತ್ತದೆ. ಪಡಿತರ ಚೀಟಿಯಲ್ಲಿ ಗೃಹಿಣಿಯ ಹೆಸರು ಇದ್ದರೆ ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯ.

ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ ಗುರುತಿನ ಪುರಾವೆಯಾಗಿದೆ. ದುರದೃಷ್ಟವಶಾತ್,  ಇನ್ನೂ ಸಾಕಷ್ಟು ಜನರಿಗೆ ಪಡಿತರ ಚೀಟಿಗಳಿಲ್ಲ. ಈ ಕಾರಣದಿಂದಾಗಿ, ಅವರು ಈ ಯೋಜನೆಯಿಂದ ವಂಚಿತರಾಗುತ್ತಾರೆ ಮತ್ತು ಅಗತ್ಯವಿರುವ ಪಡಿತರ ಪಡೆಯಲು ಪಡೆಯಲು ಸಾಧ್ಯವಾಗುವುದಿಲ್ಲ.
ಹೀಗಿರುವಾಗ, ಕರ್ನಾಟಕ ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹೊಸ ರೇಷನ್ ಕಾರ್ಡ್‌ (New Ration Card Application)

ಕೆಲವು ತುರ್ತು ಅಗತ್ಯಗಳನ್ನು ಪೂರೈಸಲು, ಸರ್ಕಾರವು ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಯೋಜನೆಯಡಿ ಈ ಕೆಳಗಿನವರು ಅರ್ಜಿ ಸಲ್ಲಿಸಬಹುದು:

– ಹೊಸದಾಗಿ ಮದುವೆಯಾಗಿ ಸಂಸಾರ ಆರಂಭಿಸುವ ದಂಪತಿಗಳು

– ಮದುವೆಯ ನಂತರ ಪ್ರತ್ಯೇಕವಾಗಿ ವಾಸಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಹರಾಗುತ್ತಾರೆ.

– ಕುಟುಂಬದಿಂದ ಬೇರೆಯಾಗಿ ಜೀವನ ನಡೆಸುವ ದಂಪತಿಗಳು

– ಈಗಾಗಲೇ ರೇಷನ್ ಕಾರ್ಡ್ ಹೊಂದಿರುವ ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸುವ ದಂಪತಿಗಳು ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು.

ರೇಷನ್ ಕಾರ್ಡ್: ತಿದ್ದುಪಡಿಗೆ ಅವಕಾಶ, (Ration card correction)

ಹೊಸ ಸದಸ್ಯರ ಸೇರ್ಪಡೆ, ತಪ್ಪುಗಳ ತಿದ್ದುಪಡಿ, ಮತ್ತು ವಿಳಾಸ ಬದಲಾವಣೆ ಸೇರಿದಂತೆ ರೇಷನ್ ಕಾರ್ಡ್‌ಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಈ ಜೊತೆಗೆ, ಹೊಸ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:

ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.

ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?

ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

whatss

WhatsApp Group Join Now
Telegram Group Join Now

Popular Categories