ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರು ಸರಕಾರಿ ಶಾಲೆಗಳಿಗೆ ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು ಸೇರಿದಂತೆ ಒಟ್ಟು 19,000 ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದಾಗಿ ಪ್ರಕಟಿಸಿದರು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಇನ್ನು ಮುಂದಿನ ನೇಮಕಾತಿಗಳಿಗೆ ಸಂಬಂಧಿಸಿದಂತೆ, ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಸಮಿತಿಯು ಪರಿಶಿಷ್ಟ ಜಾತಿ ಮೀಸಲಾತಿ ಸಂಬಂಧಿತ ವರದಿಯನ್ನು ಸಲ್ಲಿಸಿದ ನಂತರ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ ಪ್ರದೇಶಗಳಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದರ ಜೊತೆಗೆ, ಸರ್ಕಾರವು 5,000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸುವ ಗುರಿ ಹೊಂದಿದೆ. ಹೊಸ ಕೆಪಿಎಸ್ (KPS) ಶಾಲೆಗಳನ್ನು ಪ್ರಾರಂಭಿಸುವ ಕಾರ್ಯಕ್ರಮವೂ ಹಾಲಿಕಲ್ಲಾಗಿದೆ. ಈ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಲು “ಓದು ಕರ್ನಾಟಕ”, “ಕಲಿಕಾ ದೀಪ”, “ಗಣಕ ಗಣಿತ”, ಮತ್ತು “ಕಲಿಕಾ ಚಿಲುಮೆ” ವಿಶೇಷ ಶಿಕ್ಷಣ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುವುದು.
ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಸರ್ಕಾರಿ ಸ್ಟುಡಿಯೋಗಳಲ್ಲಿ ಪಾಠಗಳನ್ನು ಚಿತ್ರೀಕರಿಸಿ, ಅವುಗಳನ್ನು ಶಾಲೆಗಳ ಡಿಜಿಟಲ್ ಬೋರ್ಡ್ಗಳ ಮೂಲಕ ಪ್ರಸಾರ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಕ್ರಮಗಳು ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ ಮತ್ತು ಪರಿಣಾಮಕಾರಿಯಾಗಿ ಮಾಡುವ ದಿಶೆಯಲ್ಲಿ ಮಹತ್ವದ ಹೆಜ್ಜೆ ಎಂದು ಪರಿಗಣಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.