Breaking News: ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ ಸರ್ಕಾರದ ಆದೇಶ

reservation is compulsory in outsourcing recruitment

ಹೊರಗುತ್ತಿಗೆ ನೇಮಕಾತಿಯಲ್ಲಿಯೂ (Outsourcing Recruitment) ಮೀಸಲಾತಿ ಕಡ್ಡಾಯ (reservation is compulsory) :

ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರ ನೇಮಕಾತಿಗೆ ಸಜ್ಜಾದ ರಾಜ್ಯ ಸರ್ಕಾರ (state government).
ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ಕೂಡ ನಾವು ಮೀಸಲಾತಿ ಕಡ್ಡಾಯವಾಗಿರುವುದನ್ನು ಕಾಣಬಹುದು. ವಿದ್ಯಾಸಂಸ್ಥೆಗಳಿಂದ ಹಿಡಿದು ಸರ್ಕಾರಿ ನೌಕರಿಗಳವರೆಗೂ ಮೀಸಲಾತಿ (reservation) ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ (state government) ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಕೂಡ ಮೀಸಲಾತಿಯನ್ನು ಕಡ್ಡಾಯ ಮಾಡಬೇಕೆಂದು ಅಧಿಕೃತ ಆದೇಶವನ್ನು ಹೊರಡಿಸಿದೆ. ಕರ್ನಾಟಕ ಸರ್ಕಾರದ ವಿವಿಧ ಇಲಾಖೆಯಲ್ಲಿ ಹೊರಗುತ್ತಿಗೆ ನೇಮಕಾತಿಯನ್ನು ನಡೆಸಲಾಗುತ್ತದೆ. ಈ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುವಂತೆ ಸುತ್ತೋಲೆಯನ್ನು ಹೊರಡಿಸಲಾಗಿದೆ. ಈ ಸುತ್ತೋಲೆ ರಾಜ್ಯ ಸರ್ಕಾರದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸಬೇಕು ಎಂಬ ವಿಷಯ ಒಳಗೊಂಡಿರುತ್ತದೆ. ದಿನಾಂಕ 19/5/2022ರ ಸುತ್ತೋಲೆ ಸಂಖ್ಯೆ(circular number) : ಸಿಆಸುಇ 137 ಎಇಎಸ್ 2022 ಉಲ್ಲೇಖ ಮಾಡಲಾಗಿದೆ. ಇನ್ನು ಈ ಸುತ್ತೋಲೆಯಲ್ಲಿ ಯಾವೆಲ್ಲ ನಿಯಮಗಳು ಇರಲಿವೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸಚಿವ ಸಂಪುಟ ಸಭೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ನೀತಿಯನ್ನು ಜಾರಿಗೊಳಿಸಲು ನಿರ್ಣಯಿಸಲಾಗಿತ್ತು. ಆದುದರಿಂದ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಅಂದರೆ ರಾಜ್ಯ ಸರ್ಕಾರದ ಕಛೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಭಂದಿ, ಗ್ರೂಪ್-ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯನೀತಿಯಾಗಿರುತ್ತದೆ ಎಂದು ಸುತ್ತೋಲೆ ಹೇಳಿದೆ. ಈಗಾಗಲೇ ಜಾರಿಯಲ್ಲಿರುವ ಮೀಸಲಾತಿ ನಿಯಮವನ್ನು ಈ ಸೂಚನೆಗಳೊಂದಿಗೆ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಮಹಿಳೆಯರಿಗೂ ಮೀಸಲಾತಿ ಕಡ್ಡಾಯ (Reservation is mandatory for women too) :

ಇನ್ನು ಈ ಸುತ್ತೋಲೆಯಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮಹಿಳಾ ಮೀಸಲಾತಿ ಕಡ್ಡಾಯ. ಎಂದು ರಾಜ್ಯ ಸರ್ಕಾರದಿಂದ (state government)  ಅಧಿಕೃತ ಆದೇಶ ಹೊರಡಿಸಲಾಗಿದೆ.ಈ ಸುತ್ತೋಲೆಯ ಪ್ರಕಾರ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕಿದೆ.

ಮೀಸಲಾತಿ ನಿಯಮಗಳು (reservation rules) :

ಹೊರಗುತ್ತಿಗೆ ಮೀಸಲಾತಿಯು ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.
ಪ್ರತಿ ವರ್ಷವು ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆ.ಟಿ.ಪಿ.ಪಿ ಅಧಿನಿಯಮ (KTPP act) 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.
ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು.
ಟೆಂಡರ್‌ ಅಂಗೀಕರಿಸುವ ಪ್ರಾಧಿಕಾರವು ಕಡ್ಡಾಯವಾಗಿ ಹೊರ ಸಂಪನ್ಮೂಲ ಏಜೆನ್ಸಿಯು ಅಂತಿಮಗೊಳಿಸಿದ ಸಿಬ್ಬಂದಿಗಳ ಪಟ್ಟಿ, ಮೀಸಲಾತಿಯಂತೆ ಇರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ಜಾತಿ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಗಳನ್ನು ಟೆಂಡರ್ (tender) ಹೊರ ಸಂಪನ್ಮೂಲ ಏಜೆನ್ಸಿಯು ಪಡೆದು ನಿರ್ವಹಿಸತಕ್ಕದ್ದು. ಅಂಗೀಕರಿಸುವ ಪ್ರಾಧಿಕಾರವು ಈ ಬಗ್ಗೆ ಪರಿಶೀಲಿಸಿ ಕಾರ್ಯಾದೇಶವನ್ನು ನೀಡಲು ಕ್ರಮವಹಿಸುವುದು. (ಸಿಂಧುತ್ವ ಪ್ರಮಾಣ ಪತ್ರದ ಅಗತ್ಯವಿರುವುದಿಲ್ಲ)
ಒಂದು ವೇಳೆ ನೇಮಕಾತಿಗೊಂಡ ಅಭ್ಯರ್ಥಿಗಳು ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ/ ಅರ್ಧದಲ್ಲಿ ಬಿಟ್ಟಿದ್ದಲ್ಲಿ ಅಂತಹ ಖಾಲಿ ಉಳಿಯುವ ಸ್ಥಾನವನ್ನು ಭರ್ತಿ ಮಾಡಲು ಅದೇ ಪವರ್ಗದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಅಭ್ಯರ್ಥಿಗಳನ್ನು ಒದಗಿಸುವ ಏಜೆನ್ಸಿಯು ಕ್ರಮ ಕೈಗೊಳ್ಳತಕ್ಕದ್ದು.
ಯಾವುದೇ ಇಲಾಖೆಯಲ್ಲಿ ಕನಿಷ್ಠ 20 ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಸಂದರ್ಭದಲ್ಲಿ ಮಾತ್ರ ಮೀಸಲಾತಿ ನೀತಿಯನ್ನು ಜಾರಿಗೊಳಿಸತಕ್ಕದ್ದು.
ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವ ಅಭ್ಯರ್ಥಿಯ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 60 ವರ್ಷಗಳಾಗಿರತಕ್ಕದ್ದು.
ಸಾಮಾಜಿಕ ನ್ಯಾಯ ಮತ್ತು ಸಮಾನ ಉದ್ಯೋಗಾವಕಾಶಗಳನ್ನು ಒದಗಿಸುವ ದೃಷ್ಟಿಯಿಂದ ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿಯನ್ನು ಅಳವಡಿಸುತ್ತಿರುವುದರಿಂದ ಯಾವುದೇ ಕಾರಣಕ್ಕಾಗಿ ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಲು ಪರಿಗಣಿಸತಕ್ಕದ್ದಲ್ಲ.

ಈ ಮೇಲಿನ ಸೂತ್ತೋಲೆಯಲ್ಲಿನ ಸೂಚನೆಗಳು ಸರ್ಕಾರದ ಎಲ್ಲಾ ಇಲಾಖೆಗಳು/ ಸ್ವಾಯತ್ತ ಸಂಸ್ಥೆಗಳು/ ನಿಗಮಗಳು/ ಮಂಡಳಿಗಳು/ ವಿಶ್ವವಿದ್ಯಾನಿಲಯಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!