ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಒಂದು ಬಂದಿದೆ ಅದೇನೆಂದರೆ ಶಾಲೆಯ ಅಂಗಳದಲ್ಲಿ ತಾರಾಲಯ ಯೋಜನೆ. ನಗರಗಳಿಗೆ ಸೀಮಿತವಾಗಿದ್ದ ಪ್ಲಾನೆಟೇರಿಯಂ ಅನುಭವದಿಂದ ಗ್ರಾಮೀಣ ವಿದ್ಯಾರ್ಥಿಗಳು ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿತವಾಗಿದೆ. ಇದೀಗ ಈ ಯೋಜನೆ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗಲು ಶಾಲೆಯ ಅಂಗಳದಲ್ಲಿ ತಾರಾಲಯ ಕಾರ್ಯಕ್ರಮಕ್ಕೆ ಚಾಲನೆಯನ್ನು ಸಿಎಂ ಸಿದ್ಧರಾಮಯ್ಯನವರು(C M siddaramaiah) ನೀಡಿದರು.
ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಈಗಾಗಲೇ ಈ ಯೋಜನೆ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿರುವುದಾಗಿ ಖುಷಿಯನ್ನು ವ್ಯಕ್ತಪಡಿಸಿದರು. ಈ ಯೋಜನೆಗೆ ಸುಧಾರಿತ ಹಾಗೂ ಹೊಸ ಚೈತನ್ಯ ತಂತ್ರಜ್ಞಾನದ ಸ್ಪರ್ಶ ನೀಡಲಾಗಿದೆ, ಈಗ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿರುವ ಈ ಯೋಜನೆ ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಯ ಶಾಲೆಗಳಿಗೆ ದೊರಕುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಈ ಯೋಜನೆಯಲ್ಲಿ ಏನಿರುತ್ತದೆ?:
ಸುಸಜ್ಜಿತ ವಾಹನಗಳಲ್ಲಿ 5 ಮೀಟರ್ ಗಾತ್ರದ ಗುಂಬಜ್ (Dome), 360-ಡಿಗ್ರಿ ಫಿಶ್ ಐ ಲೆನ್ಸ್ ಪ್ರೊಜೆಕ್ಟರ್, ಹವಾ ನಿಯಂತ್ರಣ ವ್ಯವಸ್ಥೆ ಮತ್ತು ಅತ್ಯಾಧುನಿಕ ಧ್ವನಿವರ್ಧಕಗಳನ್ನು ಅಳವಡಿಸಲಾಗಿರುತ್ತದೆ. ಮಕ್ಕಳು ಶಾಲೆಯ ಅಂಗಳದಲ್ಲೇ ಕುಳಿತು ಬ್ರಹ್ಮಾಂಡದ ಅದ್ಭುತಗಳನ್ನು ವೀಕ್ಷಿಸುವ ಅಪರೂಪದ ಅವಕಾಶವನ್ನು ಇದು ಕಲ್ಪಿಸಲಿದೆ.
ಶಾಲೆಯ ಅಂಗಳದಲ್ಲಿ ತಾರಾಲಯ
ಈಗಾಗಲೇ ರಾಜ್ಯದಲ್ಲಿ 11 ಡಿಜಿಟಲ್ ಮೊಬೈಲ್ ಪ್ಲಾನೆಟೋರಿಯಂ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಹೈಸ್ಕೂಲ್‌ಗಳಲ್ಲಿ 46 ಸಾವಿರಕ್ಕೂ ಹೆಚ್ಚು ಪ್ರದರ್ಶನ ನೀಡಿದೆ.
ರಾಜ್ಯದಾದ್ಯಂತ 16.75 ಲಕ್ಷ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 6 ಸಂಚಾರಿ ಡಿಜಿಟಲ್ ತಾರಾಲಯ ಸಕ್ರಿಯವಾಗಿದ್ದು, ಶಾಲಾ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿಯನ್ನು ಬಿತ್ತುವಲ್ಲಿ ಯಶಸ್ವಿಯಾಗಿವೆ.
ಭವಿಷ್ಯದಲ್ಲಿ ಗ್ರಾಮೀಣ – ನಗರ ಎಂಬ ಶೈಕ್ಷಣಿಕ ಅಂತರ ಕಡಿಮೆಯಾಗಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಈ ಯೋಜನೆ ನೆರವಾಗಲಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group





Leave a Reply