WhatsApp Image 2025 10 13 at 10.22.02 AM

Banking Jobs: SBI ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ; ತಿಂಗಳ ಬರೋಬ್ಬರಿ ₹1.35 ಲಕ್ಷದವರೆಗೆ ಸಂಬಳ.!

Categories:
WhatsApp Group Telegram Group

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟಾರೆ 10 ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು, ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ (PG), ಎಂಬಿಎ (MBA) ಅಥವಾ ಪಿಜಿಡಿಬಿಎಂ (PGDBM) ವಿದ್ಯಾರ್ಹತೆ ಹಾಗೂ ಅಗತ್ಯ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಕೇವಲ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹64,820 ರಿಂದ ಗರಿಷ್ಠ ₹1,35,020 ವರೆಗೆ ವೇತನ ದೊರೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 28, 2025 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:

ಹುದ್ದೆಯ ಹೆಸರುಖಾಲಿ ಹುದ್ದೆಗಳ ಸಂಖ್ಯೆ
ಮ್ಯಾನೇಜರ್6
ಡೆಪ್ಯೂಟಿ ಮ್ಯಾನೇಜರ್3
ಸಹಾಯಕ ಜನರಲ್ ಮ್ಯಾನೇಜರ್1
ಒಟ್ಟು10

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಕಡ್ಡಾಯವಾಗಿ ಪಿಜಿ, ಎಂಬಿಎ ಅಥವಾ ಪಿಜಿಡಿಬಿಎಂ ಪದವಿ ಉತ್ತೀರ್ಣರಾಗಿರಬೇಕು ಮತ್ತು ಅಧಿಸೂಚನೆಯಲ್ಲಿ ತಿಳಿಸಿರುವಷ್ಟು ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ ಮಾಹಿತಿ:

ಅಭ್ಯರ್ಥಿಗಳ ವಯೋಮಿತಿಯನ್ನು ಆಗಸ್ಟ್ 8, 2025 ರಂತೆ ಲೆಕ್ಕ ಹಾಕಲಾಗುತ್ತದೆ.

ಡೆಪ್ಯೂಟಿ ಮ್ಯಾನೇಜರ್: ಗರಿಷ್ಠ 30 ವರ್ಷಗಳು.

ಸಹಾಯಕ ಜನರಲ್ ಮ್ಯಾನೇಜರ್: ಕನಿಷ್ಠ 35 ವರ್ಷದಿಂದ ಗರಿಷ್ಠ 45 ವರ್ಷಗಳು.

ಮ್ಯಾನೇಜರ್: ಕನಿಷ್ಠ 24 ವರ್ಷದಿಂದ ಗರಿಷ್ಠ 36 ವರ್ಷಗಳು.

ಅರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಪೂರೈಸುವ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕದ ವಿವರ:

ಸಾಮಾನ್ಯ (General), ಒಬಿಸಿ (OBC), ಮತ್ತು ಇಡಬ್ಲ್ಯೂಎಸ್ (EWS) ವರ್ಗದ ಅಭ್ಯರ್ಥಿಗಳಿಗೆ: ಪ್ರತಿ ಅಭ್ಯರ್ಥಿಗೆ ₹750 ಶುಲ್ಕ ನಿಗದಿಪಡಿಸಲಾಗಿದೆ.

ಎಸ್‌ಸಿ (SC), ಎಸ್‌ಟಿ (ST), ಮತ್ತು ಪಿಡಬ್ಲ್ಯೂಬಿಡಿ (PwBD) ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ:

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಯಾವುದೇ ಲಿಖಿತ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹64,820 ರಿಂದ ₹1,35,020 ವರೆಗೆ ವೇತನ ದೊರೆಯಲಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories