ಈ ವರದಿಯಲ್ಲಿ ಎಸ್‌ಬಿಐ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ (SBI and Karnataka Public Works Department Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತಸದ ಸುದ್ದಿಯೇ ಸಿಕ್ಕಂತಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ(KPWD) ಇಬ್ಬರೂ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕದ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಈ ಹುದ್ದೆಗಳ ಬಗ್ಗೆ ಪೂರ್ಣ ಮಾಹಿತಿ, ಅರ್ಹತಾ ಮಾನದಂಡ, ಆಯ್ಕೆ ಪ್ರಕ್ರಿಯೆ, ಹಾಗೂ ವೇತನವಿವರಗಳನ್ನು ಇಲ್ಲಿ ನೀಡಲಾಗಿದೆ.
ಎಸ್‌ಬಿಐ ಕರ್ನಾಟಕ – 203 ಜೂನಿಯರ್ ಅಸೋಸಿಯೇಟ್ ಹುದ್ದೆಗಳು:
ಎಸ್‌ಬಿಐ (SBI) ಈ ಬಾರಿ 203 ಜೂನಿಯರ್ ಅಸೋಸಿಯೇಟ್ ಹುದ್ದೆಗಳ (Junior Associate post) ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಬ್ಯಾಂಕ್ ವಲಯದಲ್ಲಿ ಉದ್ಯೋಗ ನಿರೀಕ್ಷಿಸುತ್ತಿರುವವರಿಗೆ ಇದು ಅದ್ಬುತ ಅವಕಾಶ.
ಹುದ್ದೆ ವಿವರ:
ಹುದ್ದೆಯ ಹೆಸರು: ಜೂನಿಯರ್ ಅಸೋಸಿಯೇಟ್(Junior Associate)
ಒಟ್ಟು ಹುದ್ದೆಗಳು: 203
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 2, 2025
ವೇತನ ಶ್ರೇಣಿ: ₹24,050 – ₹64,480
ಅರ್ಹತೆ: ಬಿಎ, ಬಿಕಾಂ, ಬಿಇ ಅಥವಾ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ: 20 ರಿಂದ 28 ವರ್ಷ (ಅನುದಾನ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿದೆ)
ಆಯ್ಕೆ ಪ್ರಕ್ರಿಯೆ:
ಪೂರ್ವಭಾವಿ ಪರೀಕ್ಷೆ (Preliminary Exam) – ಇದರ ಮೂಲಕ ಪ್ರಾಥಮಿಕ ಲೆಕ್ಕಾಚಾರ ಮಾಡಲಾಗುತ್ತದೆ.
ಮುಖ್ಯ ಪರೀಕ್ಷೆ (Main Exam) – ಮುಖ್ಯ ಪರೀಕ್ಷೆಯಲ್ಲಿ ಪ್ರಾಯೋಗಿಕ ಸಾಮರ್ಥ್ಯ ಹಾಗೂ ವಿಚಾರಶಕ್ತಿ ಪರೀಕ್ಷೆ ಮಾಡಲಾಗುತ್ತದೆ.
ಭಾಷಾ ಪ್ರಾವೀಣ್ಯತೆ ಪರೀಕ್ಷೆ (Language Proficiency Test – LPT) – ಕನ್ನಡ ಭಾಷೆಯಲ್ಲಿ ಪ್ರಯೋಜನಮಯ ಜ್ಞಾನ ಇರಬೇಕು.
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ https://www.onlinesbi.sbi/ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
ಕರ್ನಾಟಕ ಲೋಕೋಪಯೋಗಿ ಇಲಾಖೆ – 30 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳು:
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ(KPWD) ಸಹಾಯಕ ಕಾರ್ಯಪಾಲಕ ಇಂಜಿನಿಯರ್ (Group A) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಇದು ಚಿನ್ನದ ಅವಕಾಶ.
ಹುದ್ದೆ ವಿವರ:
ಹುದ್ದೆಯ ಹೆಸರು: ಸಹಾಯಕ ಕಾರ್ಯಪಾಲಕ ಇಂಜಿನಿಯರ್ (Group A)
ಒಟ್ಟು ಹುದ್ದೆಗಳು: 30
ಮುನ್ಸೂಚನೆ ದಿನಾಂಕ: ಸೆಪ್ಟೆಂಬರ್ 18, 2024
ಪುನಃ ಅರ್ಜಿ ಆಹ್ವಾನ: ಜನವರಿ 20, 2025 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ.
ಕೊನೆ ದಿನಾಂಕ : ಫೆಬ್ರವರಿ 03 2025
ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ವೇತನ 83,700-1,55,200 ರೂಪಾಯಿವರೆಗೂ ಇರಲಿದೆಸರಕಾರಿ ನಿಯಮಾವಳಿಯ ಪ್ರಕಾರ
ವಿದ್ಯಾರ್ಹತೆ: ಸಿವಿಲ್ ಅಥವಾ ಸಂಬಂಧಿತ ಇಂಜಿನಿಯರಿಂಗ್ ಡಿಗ್ರಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ವಯೋಮಿತಿ: 21 ರಿಂದ 35 ವರ್ಷ (ವಿಶೇಷ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ)
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ: ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಪರೀಕ್ಷೆ ನಡೆಸಲಾಗುತ್ತದೆ.
ಸಂದರ್ಶನ: ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಂತಿಮ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.
ಹುದ್ದೆಗಳ ಮೀಸಲಾತಿ:
ಸಾಮಾನ್ಯ ವರ್ಗ – 13
ಪರಿಶಿಷ್ಟ ಜಾತಿ – 5
ಪರಿಶಿಷ್ಟ ಪಂಗಡ – 2
ಪ್ರವರ್ಗ 1 – 1
ಪ್ರವರ್ಗ 2A – 5
ಪ್ರವರ್ಗ 2B – 1
ಪ್ರವರ್ಗ 3A – 1
ಪ್ರವರ್ಗ 3B – 1
ಸೇವಾನಿರತ ಸ್ಪರ್ಧೆ – 1
ಅಭ್ಯರ್ಥಿಗಳು ಹೆಚ್ಚಿನ ಮಾಹತಿಗಾಗಿ ಅಧಿಸೂಚನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಕೊನೆಯದಾಗಿ ಹೇಳುವುದಾದರೆ, ಈಗ ಕರ್ನಾಟಕದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಎರಡು ಉತ್ತಮ ಅವಕಾಶಗಳು ಲಭ್ಯವಿವೆ. ಎಸ್‌ಬಿಐನಲ್ಲಿ 203 ಜೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ, ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ 30 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂತಹ ಉದ್ಯೋಗ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ಮುನ್ನವೇ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಎಸ್‌ಬಿಐ ಬ್ಯಾಂಕ್: ಫೆಬ್ರವರಿ 2, 2025 (ಅಂತಿಮ ದಿನಾಂಕ)
ಕರ್ನಾಟಕ ಲೋಕೋಪಯೋಗಿ ಇಲಾಖೆ: ಅರ್ಜಿ ಪ್ರಕ್ರಿಯೆ ಪುನಃ ಆರಂಭ :ಫೆಬ್ರವರಿ 03 2025
ಹೆಚ್ಚಿನ ಮಾಹಿತಿಗಾಗಿ ಎಸ್‌ಬಿಐ ಮತ್ತು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ಗೆ ಭೇಟಿ ನೀಡಿ.ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




