IMG 20240712 WA0005

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

WhatsApp Group Telegram Group

ಅತ್ಯುತ್ತಮ ಅಂಕಗಳನ್ನು ಪಡೆದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ(SSLC and II PUC) ಪಾಸಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (scholarship). ಹೌದು, ವಿದ್ಯಾ ಪೋಷಕರ(vidhya poshak) ಸಂಘದಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವು ಮೀಸಲಾಗಿದೆ. ಆರ್ಥಿಕವಾಗಿ ಹಿಂದುಳಿದಂತ ಒಕ್ಕಲಿಗ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು, ಅರ್ಜಿಯನ್ನು ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾ ಪೋಷಕರ ಸಂಘದ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

ವಿದ್ಯಾರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು
ಹತ್ತನೇ ಹಾಗೂ ದ್ವಿತೀಯ ಪಿಯುಸಿಯಲ್ಲಿ 90 % ಅಥವಾ ಅದಕ್ಕಿಂತ ಹೆಚ್ಚಿನ ಅಂಕವನ್ನು ಪಡೆದಿರಬೇಕು
ಬೆಂಗಳೂರು ಉತ್ತರ ತಾಲೂಕು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ಬೇಕಾದ ದಾಖಲೆಗಳು :

ಜಾತಿ ಹಾಗೂ ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್
ಬ್ಯಾಂಕ್ ಪುಸ್ತಕ
ಮಾಕ್ಸ್ ಕಾರ್ಡ್ ನಕಲು ಪ್ರತಿ
ವಿಳಾಸ ಹಾಗೂ ಮೊಬೈಲ್ ನಂಬರಿನ ಅರ್ಜಿ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು :
ಅಧ್ಯಕ್ಷರು, ವಿದ್ಯಾಪೋಷಕರ ಸಂಘ, ನಂ.12, ಇಂಚರ, 2ನೇ ಮುಖ್ಯರಸ್ತೆ, ಸುರಭಿ ಬಡಾವಣೆ, ಯಲಹಂಕ, ಬೆಂಗಳೂರು-560064′.

ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ :

ಜುಲೈ 31, 2024.

ಹೆಚ್ಚಿನ ವಿವರಗಳಿಗೆ: 9008891539, 9845048696 ಮೊಬೈಲ್‌ ಸಂಖ್ಯೆಗೆ ಸಂಪರ್ಕಿಸಬಹುದು

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories