Home » ಮುಖ್ಯ ಮಾಹಿತಿ » ವಿದ್ಯಾರ್ಥಿನಿಯರಿಗೆ 5,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ : SOF Scholarship 2022-23

ವಿದ್ಯಾರ್ಥಿನಿಯರಿಗೆ 5,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ : SOF Scholarship 2022-23

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ SOF ಹೆಣ್ಣು ಮಕ್ಕಳ ವಿದ್ಯಾರ್ಥಿ ವೇತನದ ಕುರಿತಾಗಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. SOF ಎಂದರೆ ಸೈನ್ಸ್ ಒಲಂಪಿಯಾಡ್ ಫೌಂಡೇಶನ್ ಎಂದರ್ಥ. ಈ ಸಂಸ್ಥೆಯು ಹೆಣ್ಣು ಮಕ್ಕಳಿಗಾಗಿ ವಿದ್ಯಾರ್ಥಿವೇತನವನ್ನು ನೀಡಲು ಮುಂದಾಗಿದ್ದಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಹೇಗೆ ಸಲ್ಲಿಸುವುದು?, ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಇದಕ್ಕೆ ಬೇಕಾಗುವ ಮುಖ್ಯ ದಾಖಲೆಗಳು ಯಾವುವು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

SOF ಹೆಣ್ಣು ಮಕ್ಕಳ ವಿದ್ಯಾರ್ಥಿವೇತನ ಯೋಜನೆ (G.C.S.S) 2022-23 :

ವಿಜ್ಞಾನ ಒಲಂಪಿಯಾಡ್ ಫೌಂಡೇಶನ್ (SOF), 1 ರಿಂದ 10 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ದುರ್ಬಲ ಇರುವ ಕುಟುಂಬಗಳ ಹೆಣ್ಣು ಮಗುವಿಗೆ ಆರ್ಥಿಕವಾಗಿ ಸಹಾಯ ಮಾಡುವ ಗುರಿಯನ್ನು ಹೊಂದಿದೆ. ಇದರಿಂದಾಗಿ ತಮ್ಮ ಶಾಲಾ ಶಿಕ್ಷಣವನ್ನು ಮುಂದುವರಿಸಬಹುದು. ಭಾರತದಾದ್ಯಂತ ಶಾಲೆಗಳು ನೀಡಿದ ಶಿಫಾರಸುಗಳ ಆಧಾರದ ಮೇಲೆ, ಸುಮಾರು 300 ನಿರ್ಗತಿಕ ಹೆಣ್ಣು ಮಕ್ಕಳಿಗೆ ಸಂಪೂರ್ಣ ವರ್ಷಕ್ಕೆ ತಲಾ 5,000 ರೂ. ಧನ ಸಹಾಯವನ್ನು ಮಾಡುವ ಉದ್ದೇಶವನ್ನು ಈ ಸಂಸ್ಥೆ ಹೊಂದಿದೆ.

ಇದನ್ನೂ ಓದಿ : ಪ್ರತಿ ವಿದ್ಯಾರ್ಥಿಗೆ 2,500/- ರಿಂದ 11,000/- ವರೆಗೆ ಡಿಸೆಂಬರ್ ಅಂತ್ಯದೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ : Raita Vidyanidhi 2021-22

SOF (Science Olympiad Foundation) :

ಈ ಸಂಸ್ಥೆಯು ಶೈಕ್ಷಣಿಕ ಸ್ಪರ್ಧೆಯನ್ನು ಜನಪ್ರಿಯಗೊಳಿಸುವ ಮತ್ತು ಶಾಲಾ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಸಹಾಯ ಮಾಡುವ ಶೈಕ್ಷಣಿಕ ಸಂಸ್ಥೆಯಾಗಿದೆ.

ವಿದ್ಯಾರ್ಥಿವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ಅರ್ಜಿಯನ್ನು ಸಲ್ಲಿಸಲು ಬಯಸುವವರು 1 ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ಆಗಿರಬೇಕು.
  2. ಹಿಂದಿನ ತರಗತಿಯಲ್ಲಿ ಕನಿಷ್ಠ 60%ಗಳಿಂದ ಉತ್ತೀರ್ಣರಾಗಿರಬೇಕು.
  3. ತೀವ್ರ ದೈಹಿಕ ಅಂಗವೈಕಲ್ಯ ಹೊಂದಿರುವ ಹೆಣ್ಣು ಮಗುವಿಗೆ ಅಂಕಗಳು ಮತ್ತು ಶೇಕಡಾವಾರು ಮಾನದಂಡಗಳು ಅನ್ವಯಿಸುವುದಿಲ್ಲ.
  4. ಹೆಣ್ಣು ಮಗುವಿನ ಕುಟುಂಬದ ಆದಾಯ ರೂ. 15,000 ಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿ ವೇತನದ ಮೊತ್ತ :

ಭಾರತದಾದ್ಯಂತ ಆಯ್ಕೆಯಾದ 300 ಹೆಣ್ಣು ಮಕ್ಕಳಿಗೆ ಪೂರ್ಣ ವರ್ಷಕ್ಕೆ ತಲಾ 5,000 ರೂಪಾಯಿಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ಶಿಫಾರಸ್ಸು ಮಾಡುವ ಶಾಲೆಯ ಪ್ರಾಂಶುಪಾಲರು ಸಹಿ ಮಾಡಿದ ಹಿಂದಿನ ವರ್ಷದ ಅಂಕಪಟ್ಟಿ.
  2. ಕುಟುಂಬದ ಆದಾಯ ಪ್ರಮಾಣ ಪತ್ರ
  3. ದೈಹಿಕ ಅಂಗವೈಕಲ್ಯ ಹೊಂದಿದ್ದಲ್ಲಿ, ಅದರ ಪ್ರಮಾಣ ಪತ್ರ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ವಿದ್ಯಾರ್ಥಿವೇತನವನ್ನು ನಾವು ಆಫ್ಲೈನ್ (Offline) ಮುಖಾಂತರ ಸಲ್ಲಿಸಬೇಕು. ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ಅಧಿಕೃತ ಜಾಲತಾಣದ ಮುಖಪುಟವು ತೆರೆದ ನಂತರ, ಎಸ್ ಓ ಎಫ್ ಗರ್ಲ್ ಚೈಲ್ಡ್ ಸ್ಕಾಲರ್ಶಿಪ್ ಎಂಬುದನ್ನು ಆಯ್ಕೆ ಮಾಡಿ.

ಹಂತ 3 : ನಂತರ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. PDF ಅರ್ಜಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 4: ಡೌನ್ಲೋಡ್ ಮಾಡಿಕೊಂಡ ಅಷ್ಟೇ ಯನ್ನು ಪ್ರಿಂಟ್ ಔಟ್ ತೆಗೆದುಕೊಂಡು ಸಂಪೂರ್ಣವಾಗಿ ಭರ್ತಿ ಮಾಡಬೇಕು.

ಹಂತ 5: ನಂತರ ಅದರ ಜೊತೆಗೆ ಮುಖ್ಯವಾದ ದಾಖಲೆಗಳನ್ನು ಜೋಡಣೆ ಮಾಡಬೇಕು.

ಹಂತ 6 : ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :

SCIENCE OLYMPIAD FOUNDATION
Plot No. 99, First Floor, Sector 44
Gurugram -122003 (HR), India
Tel.: 0124-4951200
E-mail: [email protected] www.sofworld.org

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :ಡಿಸೆಂಬರ್ 31, 2022

ಈ ಅರ್ಜಿಯನ್ನು ಮಕ್ಕಳ ಸಲುವಾಗಿ ಶಾಲೆಯ ಮುಖ್ಯೋಪಾಧ್ಯಾಯರು ಸಲ್ಲಿಸುತ್ತಾರೆ. SOF ನ ಆಯ್ಕೆ ಸಮಿತಿಯು ಶಾಲೆಗಳು ಕಳುಹಿಸಿದ ಎಲ್ಲಾ ಶಿಫಾರಸುಗಳನ್ನು ಮೌಲ್ಯಮಾಪನ ಮಾಡುತ್ತದೆ. ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಮತ್ತು ಅವರಿಗೆ ಆಯಾ ಶಾಲೆಗಳ ಮೂಲಕ ಪ್ರತ್ಯೇಕವಾಗಿ ತಿಳಿಸಲಾಗುತ್ತದೆ. ಈ ಸಂಸ್ಥೆಯು ತನಗೆ ಯಾವುದೇ ಆದಾಯದ ದೃಷ್ಟಿ ಇಲ್ಲದೆ, ಇಂತಹ ಒಂದು ವಿದ್ಯಾರ್ಥಿ ವೇತನವನ್ನು ಹೆಣ್ಣು ಮಕ್ಕಳಿಗಾಗಿ ಮೀಸಲಿಟ್ಟಿದೆ. ಆದ್ದರಿಂದ ಎಲ್ಲಾ ಹೆಣ್ಣು ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ, ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಆದ್ದರಿಂದ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಪೋಷಕರಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!