ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ssp scholarship

ಇದೀಗ ಹಿಂದುಳಿದ ವರ್ಗದ ( Backward classes ) ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ( good news ) ತಿಳಿದು ಬಂದಿದೆ. ಹೌದು, ಮೆಟ್ರಿಕ್ ನಂತರದ ( After metric ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ(scholarship)ಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

2023- 24 ನೇ ಮೆಟ್ರಿಕ್ ನಂತರದ ಕೋರ್ಸ್ ಗಳ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ( Online ) ಮೂಲಕ ಅರ್ಜಿ ಆಹ್ವಾನ :

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ ( Last date for Applying Application ) :

ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಮುಂದಿನ ತಿಂಗಳು ಫೆಬ್ರವರಿ 15 ರ ವರೆಗೆ ಅನುಮತಿ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಈ ಮೂಲಕ ಪ್ರಕಟಣೆ ಹೊರಡಿಸಿದೆ.

ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿದ ಉದ್ದೇಶ ( Purpose of date extend ) :

ಈ ಹಿಂದೆ ಅರ್ಜಿ ಸಲ್ಲಿಕೆಗೆ ನೀಡಿದ ಗಡುವು ಪೂರ್ಣ ಗೊಂಡಿದ್ದು, ಮತ್ತೆ ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದಾರೆ. ಈ ಉದ್ದೇಶದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅವರ ಆರ್ಥಿಕ ಪರಿಸ್ಥಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 15 ರ ತನಕ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಪಡೆಯಲು ಇರಬೇಕಾದ ಅರ್ಹತೆಗಳು ( Qualifications ) :

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲುಅರ್ಜಿದಾರರು ಹಿಂದುಳಿದ ಸಮುದಾಯದವರಾಗಿರಬೇಕು.
11 ನೇ ತರಗತಿ ಅಥವಾ ಇನ್ನಾವುದೇ ಕೋರ್ಸ್ ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಬಾಲಕಿಯರಿಗೆ 30% ಮೀಸಲಾತಿ ಇದೆ.
ಅರ್ಹತಾ ಪರೀಕ್ಷೆಯಲ್ಲಿ, ಅಭ್ಯರ್ಥಿಯು ಕನಿಷ್ಠ 50% ಅಂಕಗಳನ್ನು ಗಳಿಸಬೇಕು.
ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಹೆಚ್ಚಿರಬಾರದು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

whatss

ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಕ್ಕೆ ಅಗತ್ಯವಿರುವ ಮುಖ್ಯ ಸಲ್ಲಿಸಬೇಕಾದ ಮುಖ್ಯ ದಾಖಲೆಗಳ ವಿವರ ( Important Documents ) :

ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
ವಿದ್ಯಾರ್ಥಿಗಳ SATS ಸಂಖ್ಯೆ / ಕಾಲೇಜು ನೋಂದಣಿ ಸಂಖ್ಯೆ
ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಸಂಖ್ಯೆ
ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ಲಿನ ದಾಖಲಾತಿ ಸಂಖ್ಯೆ ( ಅಲ್ಪಸಂಖ್ಯಾತಿಯ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ ) ಸೂಚನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಯ ಹೆಸರಿನಲ್ಲಿರುವ ಆರ್ ಡಿ ಇಂದ ಶುರುವಾಗುವ ಜಾತಿ ಅಥವಾ ಆದಾಯ ಅಥವಾ ಆರ್ಥಿಕವಾಗಿ ದುರ್ಬಲ ವಿಭಾಗದ ( ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ) ಪ್ರಮಾಣ ಪತ್ರಗಳ ಸಂಖ್ಯೆ.
ಇ ದೃಡಿಕರಿಸಿದ ದಾಖಲೆಗಳ ಸಂಖ್ಯೆಗಳು
ಅಂಕಪಟ್ಟಿ
ಶುಲ್ಕ ರಶೀದಿ
ಅಂಗವಿಕಲ ವಿದ್ಯಾರ್ಥಿಯಾಗಿದ್ದಲ್ಲಿ ಭಾರತ ಸರ್ಕಾರದಿಂದ ನೀಡಿರುವ ಅಂಗೈಯಲ್ಲಿ ಅಂಗವಿಕಲ ಕಾರ್ಡ್ ಸಂಖ್ಯೆ
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ರಶೀದಿಯನ್ನು ಇ-ದೃಢೀಕರಣವನ್ನು ಮಾಡಿಸುವ ಅಗತ್ಯವಿರುವುದಿಲ್ಲ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ ( Steps for Applying Application ) :

ಹಂತ1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ssp.karnataka.gov.in ಗೆ ಭೇಟಿ ನೀಡಿ.

ಹಂತ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ

ಹಂತ 4: ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರನ್ನು ಭರ್ತಿ ಮಾಡಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಪಡೆಯುತ್ತೀರಿ.

ಹಂತ 5: ನಂತರ ಅರ್ಜಿದಾರರು ಬಳಕೆದಾರ ID ಮತ್ತು ಪಾಸ್‌ವರ್ಡ್ ಅನ್ನು ಪಡೆಯುತ್ತೀರಿ. ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ( For more information ) ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಆಯಾ ಹಿಂದುಳಿದ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

tel share transformed

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

One thought on “ರಾಜ್ಯದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನದ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Leave a Reply

Your email address will not be published. Required fields are marked *

error: Content is protected !!