WhatsApp Image 2025 10 08 at 10.29.09 AM

ಕುರುಬರಿಗೆ ST ಸೇರ್ಪಡೆ: ಹೋರಾಟ ಮಾಡಿದವರು ನಾವಲ್ಲ, ಬಿಜೆಪಿಯಲ್ಲಿದ್ದ ಈಶ್ವರಪ್ಪ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

Categories:
WhatsApp Group Telegram Group

ರಾಜ್ಯದಲ್ಲಿ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಪಟ್ಟಿಗೆ ಸೇರಿಸುವ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕುರುಬರನ್ನು ಎಸ್‌ಟಿ ಸೇರ್ಪಡೆಗೆ ಹೋರಾಟ ಮಾಡಿದ್ದು ಕಾಂಗ್ರೆಸ್ ಅಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

“ಕುರುಬರನ್ನು ಎಸ್.ಟಿ.ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಕೆ.ಎಸ್. ಈಶ್ವರಪ್ಪ ಅವರು ಹೋರಾಟ ಮಾಡಿದರು. ಆಗ ಮುಖ್ಯಮಂತ್ರಿಗಳಾಗಿದ್ದ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೇಂದ್ರ ಸರ್ಕಾರ ಕೆಲವು ಸ್ಪಷ್ಟನೆಗಳನ್ನು ಕೇಳಿದೆ. ಅದಷ್ಟೇ ನಮ್ಮ ಮುಂದಿರುವ ವಿಚಾರ” ಎಂದು ಸಿದ್ದರಾಮಯ್ಯ ತಿಳಿಸಿದರು.

ವಾಲ್ಮೀಕಿ ಸಮುದಾಯದ ಎಸ್‌ಟಿ ಸೇರ್ಪಡೆ ಹಿಂದೆ ಉಗ್ರಪ್ಪ ಪಾತ್ರ

ಹಿಂದೆ ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಲು ತಾವು ಮತ್ತು ಎ.ಎಸ್. ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆ ಅವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರೂ ಆಗ ಸೇರ್ಪಡೆ ಆಗಿರಲಿಲ್ಲ. ಆದರೆ, ಉಗ್ರಪ್ಪ ಅವರ ಪ್ರಯತ್ನದಿಂದಾಗಿ, ಆಗ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸಲಾಯಿತು. ವಾಲ್ಮೀಕಿ, ಬೇಡ ಮತ್ತು ನಾಯಕ ಸಮುದಾಯಕ್ಕೆ ಮೀಸಲಾತಿ ಸಿಗುವಲ್ಲಿ ಉಗ್ರಪ್ಪನವರ ಪಾತ್ರ ಮುಖ್ಯವಾದದ್ದು ಎಂದು ಮುಖ್ಯಮಂತ್ರಿ ನೆನಪಿಸಿಕೊಂಡರು.

ಮೀಸಲಾತಿ ಹೆಚ್ಚಳಕ್ಕೆ ನನ್ನ ಬೆಂಬಲ

“ಕುರುಬರನ್ನು ಎಸ್‌ಟಿ ಗೆ ಸೇರಿಸಿದರೆ, ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲವಿದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು, ಯಾರ ಅವಕಾಶಗಳನ್ನೂ ಕಸಿದುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ” ಎಂದು ಸಿದ್ದರಾಮಯ್ಯ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಹಿಂದೆ ಜೆ.ಹೆಚ್. ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ.ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರೂ ಇಂದಿಗೂ ಅದು ಸಾಧ್ಯವಾಗಿಲ್ಲ ಎಂದರು.

ಶಿಕ್ಷಣಕ್ಕೆ ಆದ್ಯತೆ, ವಾಲ್ಮೀಕಿ ಮಹತ್ವ ಪಠ್ಯದಲ್ಲಿ ಸೇರ್ಪಡೆ

ಶೋಷಿತ ಸಮುದಾಯದಿಂದ ಬಂದರೂ ವಾಲ್ಮೀಕಿ ಅವರು ವಿಶ್ವ ಮಾನವರಾಗಿ ಶ್ರೇಷ್ಠ ರಾಮಾಯಣ ಮಹಾಕಾವ್ಯ ರಚಿಸಿದ್ದಾರೆ. ಹಾಗಾಗಿ ಸಮುದಾಯದವರು ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಸಿಎಂ ಭರವಸೆ ನೀಡಿದರು.

ಸಿದ್ದರಾಮಯ್ಯ ಸರ್ಕಾರದ ಕೊಡುಗೆ

ಎಸ್ ಸಿ/ಎಸ್ ಟಿ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಅಭಿವೃದ್ಧಿ ಬಜೆಟ್ ನಲ್ಲಿ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು, ಪ್ರತಿ ಹೋಬಳಿಗೂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಸ್ಥಾಪಿಸಿದ್ದು ತಮ್ಮದೇ ನೇತೃತ್ವದ ಸರ್ಕಾರ. ಈ ಇತಿಹಾಸವನ್ನು ತಿಳಿದುಕೊಂಡು, ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ನಿಂತವರ ಪರವಾಗಿ ಸಮುದಾಯ ನಿಲ್ಲಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.

WhatsApp Image 2025 09 05 at 11.51.16 AM 12
ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories