WhatsApp Image 2025 11 08 at 5.01.06 PM

BREAKING: ರಾಜ್ಯ ಸರ್ಕಾರದಿಂದ ‘ಕಬ್ಬಿಗೆ ಹೆಚ್ಚುವರಿ ಬೆಲೆ’ ನಿಗದಿ ಸುತ್ತೋಲೆ ಹೊರಡಿಸಿ ಅಧಿಕೃತ ಆದೇಶ

WhatsApp Group Telegram Group

ರಾಜ್ಯ ಸರ್ಕಾರದಿಂದ 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಹೆಚ್ಚುವರಿ ಕಬ್ಬು ಬೆಲೆ ನಿಗದಿಪಡಿಸಿದ ಬಗ್ಗೆ ಇದೀಗ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ ಆದೇಶದ ಪ್ರತಿಗಳು ಲೇಖನದ ಕೊನೆಯ ಹಂತದಲ್ಲಿವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಕ್ಕರೆ ಹಂಗಾಮಿನಲ್ಲಿ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ (Fair and Remunerative Price) ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು ನಿಗದಿಗೊಳಿಸಲಾಗಿದ್ದು, ವಿವರಗಳು ಈ ಕೆಳಕಂಡಂತೆ ಇರುತ್ತವೆ.

1. ಶೇಕಡ 10.25 ರಷ್ಟು ಸಕ್ಕರೆ ಇಳುವರಿಗೆ ಪ್ರತಿ ಕ್ವಿಂಟಾಲ್ ಕಬ್ಬಿಗೆ ರೂ.3550.00

2. ಶೇಕಡ 10.25ಕ್ಕೆ ಮೇಲ್ಪಟ್ಟ ಇಳುವರಿಗೆ ತದನಂತರದ ಶೇಕಡ 0.1 ರಷ್ಟು ಇಳುವರಿಗೆ ಪ್ರತಿ ಕ್ವಿಂಟಾಲ್ ಕಬ್ಬಿಗೆ ರೂ.3.46 ರಂತೆ ಹೆಚ್ಚುವರಿ ಬೆಲೆ..

3. ಶೇಕಡ 10.25ಕ್ಕಿಂತ ಕಡಿಮೆ ಹಾಗೂ ಶೇಕಡ 9.5ಕ್ಕಿಂತ ಮೇಲ್ಪಟ್ಟ ಇಳುವರಿಯನ್ನು ಹೊಂದಿರುವ ಸಕ್ಕರೆ ಕಾರ್ಖಾನೆಗಳಿಗೆ ಸಂಬಂಧಿಸಿದಂತೆ ಶೇಕಡ 0.1 ರಷ್ಟು ಇಳುವರಿಗೆ ಪ್ರತಿ ಕ್ವಿಂಟಾಲ್‌ಗೆ ರೂ.3.46ರಷ್ಟು ಪ್ರಮಾಣದಲ್ಲಿ ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ಕಡಿಮೆ ಮಾಡುವುದು. 4. ಶೇಕಡ 9.5 ರಷ್ಟು ಅಥವಾ 9.50 ಕ್ಕಿಂತ ಕಡಿಮೆ ಇಳುವರಿ ಹೊಂದಿರುವ ಕಾರ್ಖಾನೆಗಳಿಗೆ ಪ್ರತಿ ಮೆ.ಟನ್‌ಗೆ ರೂ.3290.05 ಗಳ ನ್ಯಾಯ ಮತ್ತು ಲಾಭದಾಯಕ ಬೆಲೆ ನಿಗದಿಪಡಿಸುವುದು.

2024-25ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳು ಪಡೆದ ಸಕ್ಕರೆ ಇಳುವರಿಯನ್ನು ಆಧರಿಸಿ, ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಪತ್ರದಲ್ಲಿ ನಿಗದಿಪಡಿಸಿದ ಮಾರ್ಗಸೂಚಿಗಳನ್ವಯ ರಾಜ್ಯದ ಸಕ್ಕರೆ ಕಾರ್ಖಾನೆಗಳು 2025-26ನೇ ಹಂಗಾಮಿನಲ್ಲಿ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆಯನ್ನು ನಿಗದಿಪಡಿಸಿ, ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ಆದೇಶಿಸಿರುತ್ತಾರೆ.

ದಿನಾಂಕ:10.06.2025ರಂದು ಜರುಗಿದ ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ನಿರ್ಣಯಿಸಿದಂತೆ 2025-26ನೇ ಹಂಗಾಮಿನಲ್ಲಿ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳು ಅನುಸರಿಸಬೇಕಾದ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ (4)ರ ಮನವಿಯಲ್ಲಿ ಕೇಂದ್ರ ಸರ್ಕಾರವು ನಿಗದಿಪಡಿಸಿರುವ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ ಮಾರ್ಗಸೂಚಿಗಳು ನ್ಯಾಯಯುತವಾಗಿ ಇಲ್ಲದೇ ಇರುವ ಕಾರಣ ರೈತರು ಬೆಳೆದ ಕಬ್ಬಿಗೆ ಸರಿಯಾದ ಬೆಲೆ ಸಿಗುತ್ತಿಲ್ಲವೆಂದು ಮತ್ತು ಉತ್ಪಾದನೆಗೆ ಆಗುವ ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳದೇ ಇಳುವರಿ (Recovery) ಆಧಾರದ ಮೇಲೆ ಬೆಲೆ ನಿರ್ಧಾರವಾಗುತ್ತಿರುವುದರಿಂದ ಇಳುವರಿ ವರದಿಯು ಕೂಡ ಪಾರದರ್ಶಕವಾಗಿರುವುದಿಲ್ಲವೆಂದು ರೈತರಿಗೆ ಕಬ್ಬಿನ ದರದಲ್ಲಿ ವ್ಯತ್ಯಾಸವಾಗುತ್ತಿದ್ದು ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಸಮಸ್ಯೆಯನ್ನು ಪರಿಹರಿಸುವಂತೆ ಹಾಗೂ ಪಸ್ತುತ ವರ್ಷ ರೂ.3500.00 ಗಳ ಬೆಂಬಲ ಬೆಲೆಯನ್ನು ನೀಡುವಂತೆ ವಿನಂತಿಸಿರುತ್ತಾರೆ.

ಮೇಲೆ ಓದಲಾದ ಕ್ರಮ ಸಂಖ್ಯೆ (5)ರ ಸಭಾ ಸೂಚನಾ ಪತ್ರಗಳಲ್ಲಿ ನಿಗದಿಪಡಿಸಿರುವಂತೆ ದಿನಾಂಕ: 07.11.2025ರಂದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳ ಮಾಲೀಕರು / ಪ್ರತಿನಿಧಿಗಳೊಂದಿಗೆ ಮತ್ತು ರಾಜ್ಯದ ಕಬ್ಬು ಬೆಳೆಗಾರರು ಹಾಗೂ ರೈತ ಸಂಘಟನೆಗಳ ಮುಖಂಡರು ಮತ್ತು ಪ್ರತಿನಿಧಿಗಳೊಂದಿಗೆ ಸುಧೀರ್ಘವಾಗಿ ಸಭೆಯನ್ನು ಜರುಗಿಸಲಾಗಿರುತ್ತದೆ. ಸದರಿ ಸಭೆಯಲ್ಲಿ, ರಾಜ್ಯದ ಉತ್ತರ ಭಾಗದ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿರುವುದರಿಂದ ರೈತರು ತಮ್ಮ ಕಬ್ಬಿಗೆ ಹೆಚ್ಚಿನ ಬೆಲೆಯನ್ನು ನಿಗದಿಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಕುರಿತು ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಸಕ್ಕರೆ ಕಾರ್ಖಾನೆಗಳ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿಗಳು, ಬೆಳಗಾವಿ ಜಿಲ್ಲೆ ಇವರು ನಡೆಸಿರುವ ಸಭೆಗಳ ಕುರಿತು ಹಾಗೂ ಪ್ರತಿಭಟನಾ ಸ್ಥಳದಲ್ಲಿ ರೈತ ಪ್ರತಿನಿಧಿಗಳೊಂದಿಗೆ ನಡೆಸಿದ ಸಂಧಾನ ಸಭೆಗಳ ಕುರಿತು ಚರ್ಚಿಸಲಾಯಿತು. ರೈತರ ಪ್ರತಿಭಟನೆಗಳು ಬಾಗಲಕೋಟೆ, ವಿಜಯಪುರ ಕಲಬುರಗಿ, ಹಾವೇರಿ ಮತ್ತು ಇತರ ಜಿಲ್ಲೆಗಳಲ್ಲಿಯೂ ತೀವು ಸ್ವರೂಪ ಪಡೆದುಕೊಂಡಿರುವ ಕುರಿತು ಜಿಲ್ಲಾಧಿಕಾರಿಗಳು ವಿಡೀಯೋ ಕಾನ್ಸರೆನ್ಸ್ ಮೂಲಕ ಸಭೆಯ ಗಮನಕ್ಕೆ ತಂದಿರುತ್ತಾರೆ.

ಕೇಂದ್ರ ಸರ್ಕಾರವು ರೈತರ ಕಬ್ಬಿಗೆ ನಿಗದಿಪಡಿಸಿರುವ ಎಫ್. ಆರ್.ಪಿ. ಯು ರೈತರಿಗೆ ಒಪ್ಪಿಗೆಯಾಗದೇ ಇರುವುದರಿಂದ ಮತ್ತು ಅನೇಕ ಕಾರ್ಖಾನೆಗಳು ರೈತರೊಂದಿಗೆ ಸಹಕಾರ ಮನೋಭಾವದೊಂದಿಗೆ ವ್ಯವಹರಿಸುವ ನಿಗದಿಪಡಿಸಿರುವ ಎಫ್.ಆರ್.ಪಿ ಗಿಂತ ಹೆಚ್ಚಿನ ದರವನ್ನು ಹಿಂದಿನ ವರ್ಷಗಳಲ್ಲಿ ನೀಡಿರುವುದನ್ನು ಪರಿಗಣಿಸಿ, ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ 2025-26ನೇ ಹಂಗಾಮಿನಲ್ಲಿ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಟ ಹೆಚ್ಚುವರಿ ಕಬ್ಬು ಬೆಲೆಯನ್ನು ಇಳುವರಿ ಆಧಾರದ ಮೇಲೆ ನಿಗದಿಪಡಿಸಲು ಹಾಗೂ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವನ್ನು ನೀಡಲು ಸಭೆಯು ತೀರ್ಮಾನಿಸಿರುತ್ತದೆ ಎಂದು ಆದೇಶಿಸಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಹಂಗಾಮಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕನಿಷ್ಟ ಹೆಚ್ಚುವರಿ ಕಬ್ಬು ಬೆಲೆಯನ್ನು ನಿಗದಿಪಡಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನರವನ್ನು ಒಂದು ಬಾರಿಯ ಕ್ರಮವಾಗಿ ಈ ಕೆಳಕಂಡಂತೆ ನಿಗದಿಪಡಿಸಿ ಆದೇಶಿಸಿದೆ.

ಮಾನ್ಯ ಮುಖ್ಯಮಂತ್ರಿಗಳು ಸಕ್ಕರೆ ಕಾರ್ಖಾನೆಗಳು ಮತ್ತು ರೈತ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ನಿರ್ಣಯಿಸಿದಂತೆ ನಿರ್ಧರಿಸಿದ ಕಬ್ಬು ದರಗಳು ಇಂತಿವೆ ಎಂದು ಅಧಿಕೃತವಾಗಿ ಈ ಕೆಳಗಿನಂತೆ ಸುತ್ತೋಲೆ ಹೊರಡಿಸಿದ್ದಾರೆ

WhatsApp Image 2025 11 08 at 4.49.59 PM
WhatsApp Image 2025 11 08 at 4.50.00 PM
WhatsApp Image 2025 11 08 at 4.50.00 PM 1
WhatsApp Image 2025 11 08 at 4.50.02 PM

WhatsApp Group Join Now
Telegram Group Join Now

Popular Categories