ರಾಜ್ಯ ಸರ್ಕಾರವು ಇದೀಗ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 3500 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಹತ್ವದ ಆದೇಶವನ್ನು ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ನಗರ/ಜಿಲ್ಲಾ ಪೊಲೀಸ್ ಘಟಕಗಳಲ್ಲಿ ಕಲ್ಯಾಣ ಕರ್ನಾಟಕೇತರ ಮೀಸಲಾತಿಯಡಿಯಲ್ಲಿ ರಿಕ್ತವಿರುವ ಒಟ್ಟು 3500 ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು (ಸಿಪಿಸಿ) ನೇರ ನೇಮಕಾತಿಯ ಮೂಲಕ ಭರ್ತಿಮಾಡಲು ಉಲ್ಲೇಖಿತ ಪತ್ರದಲ್ಲಿ ಸರ್ಕಾರವು ಅನುಮತಿ ನೀಡಿರುತ್ತದೆ.
ಆದ್ದರಿಂದ, ಸರ್ಕಾರದ ಉಲ್ಲೇಖಿತ ಪತ್ರವನ್ನು ಹಾಗೂ ಸದರಿ ಪತ್ರದಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿರುವ 3500 ಕಲ್ಯಾಣ ಕರ್ನಾಟಕೇತರ ಮೀಸಲಾತಿಯ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ಇಲಾಖೆಯ ವಿವಿಧ ನಗರ/ಜಿಲ್ಲಾ ಘಟಕಗಳಿಗೆ ಹಂಚಿಕೆಮಾಡಿರುವ ಸಂಖ್ಯಾವಾರು ವಿವರವನ್ನು ಅನುಬಂಧ-ಅ ರಲ್ಲಿ ತಯಾರಿಸಿ ಈ ಪತ್ರದೊಂದಿಗೆ ಲಗತ್ತಿಸಿದೆ. ಸರ್ಕಾರವು ನೇರ ನೇಮಕಾತಿಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನೀಡಿರುವ ನಿರ್ದೇಶನಗಳು ಹಾಗೂ ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಸಮತಳ ಮೀಸಲಾತಿ ಕ್ರೀಡಾ ಮೀಸಲಾತಿ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖ-2 ರಿಂದ 6 ರ ಪತ್ರಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಸಂಬಂಧಪಟ್ಟ ಘಟಕಗಳಿಂದ ನೇರ ಹಾಗೂ ಸಮತಳ ವರ್ಗೀಕರಣವನ್ನು ಸ್ಪಷ್ಟ ಬ್ಯಾಕ್ಲಾಗ್ ವಿವರಗಳೊಂದಿಗೆ ಪಡೆದು ಸದರಿ ಹುದ್ದೆಗಳ ನೇಮಕಾತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಹಾಗೂ ತೃತೀಯ ಲಿಂಗದ ಅಭ್ಯರ್ಥಿಗಳ ಮೀಸಲಾತಿ ಹಾಗೂ ನೇಮಕಾತಿಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ವಿವರವನ್ನು ಈ ಪತ್ರದೊಂದಿಗೆ ಲಗತ್ತಿಸಿ ಕಳುಹಿಸಲಾಗಿದೆ.
ತಮ್ಮ ಘಟಕಗಳಿಗೆ ಹಂಚಿಕೆ ಮಾಡಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಮತ್ತು ಸಮತಳ ವರ್ಗಿಕರಣವನ್ನು (ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ) ನೇಮಕಾತಿ ವಿಭಾಗಕ್ಕೆ ಒದಗಿಸಲು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.





ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ (Senior Editor). ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿದ್ದರೂ, ಮಾಧ್ಯಮ ಕ್ಷೇತ್ರದ ಮೇಲಿರುವ ಅತೀವ ಆಸಕ್ತಿಯಿಂದಾಗಿ 2019 ರಲ್ಲಿ ಡಿಜಿಟಲ್ ಜಗತ್ತಿಗೆ ಕಾಲಿಟ್ಟರು. ಇವರು ಆರಂಭಿಸಿದ “Suddi No.1 Kannada” ಯೂಟ್ಯೂಬ್ ಚಾನೆಲ್ ಪ್ರಸ್ತುತ 300K ಗೂ ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಹೊಂದುವ ಮೂಲಕ ಜನಪ್ರಿಯವಾಗಿದೆ. ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ಸರಳವಾಗಿ ವಿಶ್ಲೇಷಿಸಿ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತಲುಪಿಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು ಮತ್ತು ನಿಖರ ಮಾಹಿತಿ ನೀಡುವ ವಿಡಿಯೋ ಕಂಟೆಂಟ್ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವುದು ಇವರ ಬರವಣಿಗೆಯ ವಿಶಿಷ್ಟ ಶೈಲಿಯಾಗಿದೆ.


WhatsApp Group




