ಇಂದಿನ ಕಾಲದಲ್ಲಿ ಸೋಷಿಯಲ್ ಮೀಡಿಯಾ (Social Media) ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಜನರು ತಮ್ಮ ಅಭಿಪ್ರಾಯ, ಆಲೋಚನೆ, ಸುದ್ದಿಗಳು, ವಿಮರ್ಶೆಗಳನ್ನು ಫೇಸ್‌ಬುಕ್, ಟ್ವಿಟ್ಟರ್ (X), ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಹಾಗೂ ವಾಟ್ಸಾಪ್‌ಗಳಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಈ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಯೂ ಕೂಡ ಬರುತ್ತದೆ. ಏಕೆಂದರೆ, ಅಸತ್ಯ ಮಾಹಿತಿ, ಅವಹೇಳನಕಾರಿ ಕಾಮೆಂಟ್‌ಗಳು, ಸಮಾಜದಲ್ಲಿ ಭಿನ್ನಾಭಿಪ್ರಾಯ ಉಂಟುಮಾಡುವಂತಹ ಪೋಸ್ಟ್‌ಗಳು ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ (Public peace and law and order are threatened) ತರುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇದೇ ಹಿನ್ನೆಲೆಯಲ್ಲಿ, ಕರ್ನಾಟಕ ಪೊಲೀಸ್ ಇಲಾಖೆ ಸೋಷಿಯಲ್ ಮೀಡಿಯಾ ಬಳಕೆದಾರರಿಗೆ (Social media user’s) ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ವಿಷಯವನ್ನು ಹಂಚಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಬೇಕು ಎಂದು ಪೊಲೀಸರು ಸ್ಪಷ್ಟ ಸಂದೇಶ ನೀಡಿದ್ದಾರೆ.
ಪೋಲೀಸ್ ಇಲಾಖೆ (Police department) ನೀಡಿರುವ ಎಚ್ಚರಿಕೆಯ ಪ್ರಕಾರ:
ಯಾವುದೇ ವ್ಯಕ್ತಿ, ಸಂಘಟನೆ, ಸಂಸ್ಥೆ ಅಥವಾ ಧರ್ಮದ ವಿರುದ್ಧ ಅವಹೇಳನಕಾರಿ, ಅಪಮಾನಕಾರಿ ಅಥವಾ ಗೌರವಕ್ಕೆ ಧಕ್ಕೆ ತರುವಂತಹ ಪೋಸ್ಟ್ ಹಾಕಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು(Strict legal action will be taken).
ಸಾರ್ವಜನಿಕ ಶಾಂತಿ ಭಂಗವಾಗುವಂತಹ ಅಥವಾ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಉದ್ದೇಶದ ಪೋಸ್ಟ್‌ಗಳನ್ನು ಸಹಿಸಲಾಗುವುದಿಲ್ಲ.
ಕಾನೂನು ಸುವ್ಯವಸ್ಥೆಗೆ ತೊಡಕಾಗುವ ರೀತಿಯ ಸಂದೇಶಗಳು, ವಿಡಿಯೋಗಳು, ಮೀಮ್ಸ್‌ಗಳು ಹಂಚಿಕೊಂಡರೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ.
ಸೋಷಿಯಲ್ ಮೀಡಿಯಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ, ಆ ಸ್ವಾತಂತ್ರ್ಯವನ್ನು ದುರುಪಯೋಗ ಪಡಿಸಿ ಅಸತ್ಯ, ಅವಹೇಳನಕಾರಿ ಅಥವಾ ಕಾನೂನು ಉಲ್ಲಂಘಿಸುವಂತಹ(Violating the law) ವಿಷಯ ಹಂಚಿಕೊಂಡರೆ ಅದರಿಂದ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಪೋಲೀಸ್ ಇಲಾಖೆಯ ಈ ಎಚ್ಚರಿಕೆ ಸಾಮಾನ್ಯ ಬಳಕೆದಾರರಿಗೆ ಮಾತ್ರವಲ್ಲ, ಸಮಾಜದಲ್ಲಿ ಪ್ರಭಾವ ಬೀರಬಲ್ಲ ನಾಯಕರಿಗೂ, ಯೂಟ್ಯೂಬರ್‌ಗಳು, ಬ್ಲಾಗರ್‌ಗಳು ಹಾಗೂ ಇನ್‌ಫ್ಲೂಯೆನ್ಸರ್‌ಗಳಿಗೂ ಸಮಾನವಾಗಿ ಅನ್ವಯಿಸುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.