‘ಸ್ವಾವಲಂಬಿ ಸಾರಥಿ’ ಯೋಜನೆ: ವಾಹನ ಖರೀದಿಗೆ 3 ಲಕ್ಷ ಸಹಾಯಧನ
ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಹಲವು ಯೋಜನೆಗಳಡಿ ಸಾಲ ಮತ್ತು ಸಹಾಯಧನಕ್ಕಾಗಿ ಸೇವಾ ಸಿಂಧು ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಗಳು ಹಿಂದುಳಿದ ವರ್ಗಗಳಿಗೆ ಸ್ವಾವಲಂಬನೆಯತ್ತ ದಾರಿ ಮಾಡಿಕೊಡುವ ಗುರಿಯನ್ನು ಹೊಂದಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
‘ಸ್ವಾವಲಂಬಿ ಸಾರಥಿ’ ಯೋಜನೆಯ ವಿವರ
ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯ ಉದ್ದೇಶ, ಆರ್ಥಿಕವಾಗಿ ಸದೃಢರಾಗಲು ಆಸಕ್ತರಿರುವವರಿಗೆ ವಾಹನ ಖರೀದಿಸಿ ಸ್ವಯಂ ಉದ್ಯೋಗ ಆರಂಭಿಸಲು ನೆರವಾಗುವುದು.
ಅರ್ಹತೆಯ ಮಾನದಂಡ:
– ವಯಸ್ಸು: ಅರ್ಜಿದಾರರ ವಯಸ್ಸು 21 ರಿಂದ 45 ವರ್ಷದೊಳಗಿರಬೇಕು.
– ಆದಾಯ ಮಿತಿ:
– ಗ್ರಾಮೀಣ ಪ್ರದೇಶ: ವಾರ್ಷಿಕ ಆದಾಯ 98,000 ರೂ.ಗಿಂತ ಕಡಿಮೆ.
– ನಗರ ಪ್ರದೇಶ: ವಾರ್ಷಿಕ ಆದಾಯ 1,20,000 ರೂ.ಗಿಂತ ಕಡಿಮೆ.
– ಚಾಲನಾ ಪರವಾನಗಿ: ಲಘು ವಾಹನ ಚಾಲನಾ ಪರವಾನಗಿ (DL) ಕಡ್ಡಾಯವಾಗಿ ಹೊಂದಿರಬೇಕು.
– ಇತರೆ: ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಿಂದ ಲಾಭ ಪಡೆದಿರಬಾರದು.
ಅಗತ್ಯ ದಾಖಲೆಗಳು:
– ಜಾತಿ ಮತ್ತು ಆದಾಯ ಪ್ರಮಾಣಪತ್ರ
– ಆಧಾರ್ ಕಾರ್ಡ್
– ಚಾಲನಾ ಪರವಾನಗಿಯ ಪ್ರತಿ
– ಬ್ಯಾಂಕ್ ಪಾಸ್ಬುಕ್ ಪ್ರತಿ
– ವಾಹನದ ಅಂದಾಜು ಖರೀದಿ ವೆಚ್ಚದ ಕೊಟೇಶನ್
– ಸ್ವಯಂ ಘೋಷಣಾ ಪತ್ರ
ಅರ್ಜಿ ಸಲ್ಲಿಕೆಯ ವಿಧಾನ:
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ಲೈನ್ನಲ್ಲಿ ಸಲ್ಲಿಸಬಹುದು. ಇಲ್ಲವೇ ಗ್ರಾಮ ಒನ್, ಬೆಂಗಳೂರು ಒನ್, ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 080-22374832, 8050770004, ಅಥವಾ 8050770005 ಸಂಖ್ಯೆಗಳನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30, 2025.
ಇತರ ಯೋಜನೆಗಳು:
ನಿಗಮವು ‘ಸ್ವಾವಲಂಬಿ ಸಾರಥಿ’ ಜೊತೆಗೆ ಈ ಕೆಳಗಿನ ಯೋಜನೆಗಳನ್ನೂ ಒದಗಿಸುತ್ತಿದೆ:
– ಸ್ವಯಂ ಉದ್ಯೋಗ ವೈಯಕ್ತಿಕ ಸಾಲ
– ಗಂಗಾ ಕಲ್ಯಾಣ ನೀರಾವರಿ ಯೋಜನೆ
– ಅರಿವು ಶೈಕ್ಷಣಿಕ ಸಾಲ
– ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ
– ಹೊಲಿಗೆ ಯಂತ್ರ ವಿತರಣೆ
– ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆ
ಯಾರಿಗೆ ಈ ಯೋಜನೆಗಳು ಅನ್ವಯ?
ಈ ಯೋಜನೆಗಳು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿಗೆ ಸೀಮಿತವಾಗಿದ್ದು, ಕೆಲವು ಸಮುದಾಯಗಳು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಇತ್ಯಾದಿ) ಈ ಯೋಜನೆಗಳಿಗೆ ಅರ್ಹವಾಗಿರುವುದಿಲ್ಲ.
ಗಮನಿಸಬೇಕಾದ ಅಂಶಗಳು:
– ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು.
– ಆಧಾರ್ ಕಾರ್ಡ್, ಜಾತಿ/ಆದಾಯ ಪ್ರಮಾಣಪತ್ರ, ಮತ್ತು ಬ್ಯಾಂಕ್ ಪಾಸ್ಬುಕ್ನಲ್ಲಿನ ವಿವರಗಳು ಒಂದೇ ಆಗಿರಬೇಕು.
– ಈ ಹಿಂದೆ ನಿಗಮದ ಯಾವುದೇ ಯೋಜನೆಯಿಂದ ಲಾಭ ಪಡೆದವರು ಅಥವಾ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
– 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದರೂ ಸೌಲಕಾಯ ಲಾಭ ಪಡೆಯದವರು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




