ಈ ವರ್ಗದ ಜನರಿಗೆ 5 ಲಕ್ಷದವರೆಗೆ ಸರ್ಕಾರಿ ಸಹಾಯಧನ, ಬಡವರು ಅರ್ಜಿ ಸಲ್ಲಿಸಿ – ಸಚಿವ ಕೃಷ್ಣ ಬೈರೇಗೌಡ

5 lakh subsidy

ಶ್ರೇಯೋಭಿವೃದ್ಧಿಗೆ ಸ್ವಾವಲಂಬಿ ಯೋಜನೆ: ಬಡವರಿಗೆ 5 ಲಕ್ಷ ಸಹಾಯಧನ.
ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ(career development) ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ(Karnataka Brahmin Development Board) ನೀಡುವ ಸ್ವಾವಲಂಭಿ ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಯಡಿ, ಸ್ವಯಂ ಉದ್ಯೋಗ(Self -employment)ಕ್ಕಾಗಿ ಬ್ಯಾಂಕ್‌(Bank)ನಿಂದ ಸಾಲ(loan) ಪಡೆದಿರುವ ಬ್ರಾಹ್ಮಣ ಕುಟುಂಬಗಳಿಗೆ ಗರಿಷ್ಠ 5 ಲಕ್ಷ ರೂಪಾಯಿ ಸಹಾಯಧನ(5 lakh rupees subsidy) ನೀಡಲಾಗುವುದು ಎಂದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಸಚಿವ ಕೃಷ್ಣ ಬೈರೇಗೌಡ (Karnataka Government Social Welfare Minister, Krishna Bairegowda) ತಿಳಿಸಿದರು.

ಬೆಂಗಳೂರಿನಲ್ಲಿ, ತಮ್ಮ ಕಚೇರಿಯಲ್ಲಿ ನಿಗಮದ ಡಿಬಿಟಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, “ಈ ಯೋಜನೆಯಡಿ, ಸಾಲದ ಮೊತ್ತದ 20% ರಷ್ಟು ಸಹಾಯಧನ ನೀಡಲಾಗುತ್ತದೆ. ಈ ಸಹಾಯಧನವನ್ನು ಬ್ಯಾಂಕ್‌ನಲ್ಲಿ ನೇರವಾಗಿ ಜಮಾ ಮಾಡಲಾಗುತ್ತದೆ. ಈ ಯೋಜನೆಯಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಕುಟುಂಬಗಳು ತಮ್ಮ ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ. ಈ ಯೋಜನೆಯಿಂದ ಲಕ್ಷಾಂತರ ಬ್ರಾಹ್ಮಣ ಕುಟುಂಬಗಳು ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದರು.

whatss

ಸ್ವಾವಲಂಭಿ ಯೋಜನೆ(Swalambhi yojana):

ಕರ್ನಾಟಕ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು ಒಂದು ಹೊಸ ಯೋಜನೆಯನ್ನು ಘೋಷಿಸಿದೆ. ಈ ಯೋಜನೆಯಡಿ, ರಾಷ್ಟ್ರೀಕೃತ ಬ್ಯಾಂಕ್‌(National banks)ಗಳಿಂದ ಸಾಲ (Loan) ಪಡೆದು ಸ್ವಯಂ ಉದ್ಯೋಗ ಸ್ಥಾಪಿಸುವ ಬ್ರಾಹ್ಮಣರಿಗೆ ಗರಿಷ್ಠ 5 ಲಕ್ಷದ ಸಹಾಯಧನ ನೀಡಲಾಗುವುದು.

ಸಹಾಯಧನದ ಪ್ರಮಾಣವು ಅಭ್ಯರ್ಥಿಯಿಂದ ಪಡೆದ ಸಾಲದ ಮೊತ್ತದ ಮೇಲೆ ಅವಲಂಬಿತವಾಗಿರುತ್ತದೆ. ಸಾಲದ ಮೊತ್ತದ ಶೇಕಡಾ 20 ರಷ್ಟು ಅಥವಾ ಗರಿಷ್ಠ 5 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಅರ್ಹರು 2024 ರ ಜನವರಿ 31 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವೆಬ್‌ಸೈಟ್‌ನಲ್ಲಿ : https://ksbdb.karnataka.gov.in/ ಅಥವಾ ಅವರ ನಿರ್ದಿಷ್ಟ ಕಚೇರಿಗಳಲ್ಲಿ ಪಡೆಯಬಹುದು.

ಯಾವ ಉದ್ಯಮಗಳಿಗೆ ಈ ಸಾಲ ದೊರೆಯುತ್ತದೆ?:

ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದು, ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗುಡಿ ಕೈಗಾರಿಕೆ ಸೇರಿದಂತೆ ಹೆಚ್ಚಿನ ಘಟಕ ವೆಚ್ಚವಿರುವ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ಬಯಸುವ ಉದ್ಯಮಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಈ ಯೋಜನೆಯು ಕರ್ನಾಟಕದ ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳಿಗೆ ಸ್ವಯಂ ಉದ್ಯೋಗ ಸ್ಥಾಪಿಸಲು ಮತ್ತು ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಒಂದು ಅದ್ಭುತ ಅವಕಾಶವಾಗಿದೆ.

tel share transformed

ಸಾಂದೀಪಿನಿ ಶಿಷ್ಯ ವೇತನ ಯೋಜನೆ(Sandipini Shishya Pay Yojana):

ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಾದಿ ಸುಗಮವಾಗಿಸಲು ಕರ್ನಾಟಕ ರಾಜ್ಯ ಸರ್ಕಾರವು “ಸಾಂದೀಪಿನಿ ಶಿಷ್ಯ ವೇತನ ಯೋಜನೆ” ಅನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ಮೆಟ್ರಿಕ್ ನಂತರದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 15,000 ರೂ. ವರೆಗೆ ಶಿಷ್ಯ ವೇತನ ನೀಡಲಾಗುತ್ತದೆ.

UG /PG ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಸಿಇಟಿ(CET) ಪ್ರವೇಶ ಪರೀಕ್ಷೆ ಮೂಲಕ ತೇರ್ಗಡೆಯಾದ ಬ್ರಾಹ್ಮಣ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ದಾಖಲಾತಿ ಶುಲ್ಕದ ಮೊತ್ತದ 2/3 ಭಾಗ ಹಾಗೂ ಗರಿಷ್ಠ ರೂ. 1 ಲಕ್ಷದ ವರೆಗೆ ಸರ್ಕಾರ ಪಾವತಿಸುತ್ತದೆ.

ಈ ಯೋಜನೆಯು ಬಡ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಾದಿಯನ್ನು ಸುಗಮಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಯೋಜನೆಯಡಿಯಲ್ಲಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಗುರಿ(Educational goals) ಗಳನ್ನು ಸಾಧಿಸಲು ಸಾಧ್ಯವಾಗುತ್ತದೆ ಮತ್ತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!