WhatsApp Image 2025 10 06 at 5.48.12 PM 1

ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

Categories:
WhatsApp Group Telegram Group

ಕರ್ನಾಟಕ ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ತಯಾರಿಕೆಯ ಕಾರ್ಯಕ್ರಮ ಅಧಿಕೃತವಾಗಿ ಆರಂಭವಾಗಿದೆ. ಚುನಾವಣಾ ಆಯೋಗದ ನಿರ್ದೇಶನಗಳಿಗೆ ಅನುಗುಣವಾಗಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳು ಈ ಪ್ರಕ್ರಿಯೆಗೆ ವಿವರವಾದ ವೇಳಾಪಟ್ಟಿಯನ್ನು ನಿಗದಿ ಪಡಿಸಿದ್ದಾರೆ. ಈ ಚುನಾವಣಾ ಕ್ಷೇತ್ರದಲ್ಲಿ 1 ನವೆಂಬರ್ 2025 ರಂತೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಮತದಾರರ ಪಟ್ಟಿ ತಯಾರಿಕೆ: ಹಂತ-ಹಂತದ ವೇಳಾಪಟ್ಟಿ

ಈ ಪ್ರಕ್ರಿಯೆಯ ಭಾಗವಾಗಿ, ಸೆಪ್ಟೆಂಬರ್ 30 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 15ರಂದು ಮೊದಲ ಬಾರಿಗೆ ಮತ್ತು ಅಕ್ಟೋಬರ್ 25 ರಂದು ಎರಡನೇ ಬಾರಿಗೆ ಈ ಬಗ್ಗೆ ವೃತ್ತಪತ್ರಿಕೆಗಳಲ್ಲಿ ಅಧಿಸೂಚನೆ ಪ್ರಕಟಿಸಲಾಗುವುದು. ಪದವೀಧರರು ‘ನಮೂನೆ-18’ ಅರ್ಜಿ ಫಾರ್ಮ್‌ನಲ್ಲಿ ತಮ್ಮ ಹೆಸರು ಸೇರಿಸಲು ನವೆಂಬರ್ 6 ರ ವರೆಗೆ ಅವಕಾಶವಿರುತ್ತದೆ. ನವೆಂಬರ್ 20 ರ ವರೆಗೆ ಕರಡು ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುವುದು. ನಂತರ ನವೆಂಬರ್ 25 ರಂದು ಈ ಕರಡು ಪಟ್ಟಿಯನ್ನು ಪ್ರಕಟಿಸಿ, ಜನತೆಯಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗುವುದು. ಡಿಸೆಂಬರ್ 10 ರ ವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಸಲ್ಲಿಕೆಯಾದ ಎಲ್ಲಾ ಆಕ್ಷೇಪಣೆಗಳನ್ನು ಡಿಸೆಂಬರ್ 25 ರೊಳಗಾಗಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಅಂತಿಮವಾಗಿ ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ಯಾರು ಅರ್ಜಿ ಸಲ್ಲಿಸಬಹುದು?

2022 ರ ನವೆಂಬರ್ 1ರಂದು ಅಥವಾ ಅದಕ್ಕೂ ಮುಂಚೆ ಯಾವುದೇ ಪದವಿ ಪಡೆದವರು ಈ ಮತದಾರರ ಪಟ್ಟಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿದಾರರು ಪದವೀಧರ ಕ್ಷೇತ್ರದ ಸಾಮಾನ್ಯ ನಿವಾಸಿಗಳಾಗಿರಬೇಕು ಮತ್ತು 1 ನವೆಂಬರ್ 2025 ರಂದು ಅರ್ಹತಾ ದಿನಾಂಕದಂತೆ, ಅದಕ್ಕೂ ಕನಿಷ್ಠ ಮೂರು ವರ್ಷಗಳ ಮೊದಲು ರಾಜ್ಯ ಸರ್ಕಾರ ಅಧಿಸೂಚಿಸಿರುವ ವಿಶ್ವವಿದ್ಯಾಲಯದಿಂದ ಪದವಿ ಅಥವಾ ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಮತದಾರರು ತಮ್ಮ ಸಂಬಂಧಿತ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಅಗತ್ಯ ದಾಖಲೆಗಳು ಮತ್ತು ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಬೇಕಾದ ದಾಖಲೆಗಳು:

  • ಆಧಾರ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಎಸ್.ಎಸ್.ಎಲ್.ಸಿ. ಅಂಕಪಟ್ಟಿ
  • ಪದವಿ ಪ್ರಮಾಣಪತ್ರದ ನಕಲು
  • ಒಂದು ಪಾಸ್ ಪೋರ್ಟ್ ಗಾತ್ರದ ಫೋಟೋ

ಈ ದಾಖಲೆಗಳು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಲ್ಪಟ್ಟಿರಬೇಕು. ರೇಷನ್ ಕಾರ್ಡ್, ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಬ್ಯಾಂಕ್/ಕಿಸಾನ್/ಅಂಚೆ ಖಾತೆಯ ಪಾಸ್‌ಬುಕ್ ನಂತರದ ದಾಖಲೆಗಳನ್ನೂ ಸಲ್ಲಿಸಬಹುದು. ಅರ್ಜಿದಾರರು ನಮೂನೆ-18 ಅರ್ಜಿಯನ್ನು ತಮ್ಮ ವಾಸಸ್ಥಳದ ಸಹಾಯಕ ಮತದಾರರ ನೋಂದಣಿ ಅಧಿಕಾರಿ ಅಥವಾ ನಿಗದಿತ ಅಧಿಕಾರಿಗಳಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ಫಾರ್ಮ್

ಅರ್ಜಿ ನಮೂನೆಯನ್ನು ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ https://eci.gov.in ಅಥವಾ ಕರ್ನಾಟಕ ರಾಜ್ಯ ಚುನಾವಣಾ ಅಧಿಕಾರಿಯ ವೆಬ್‌ಸೈಟ್ https://ceo.karnataka.gov.in ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಜಿಲ್ಲಾಧಿಕಾರಿ ಕಚೇರಿ ಮತ್ತು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸಹ ಈ ಫಾರ್ಮ್‌ಗಳು ಲಭ್ಯವಿರುತ್ತವೆ.

ಸಹಾಯ ಮತ್ತು ಮಾರ್ಗದರ್ಶನ

ಮತದಾರರ ಪಟ್ಟಿ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು:

  • ಜಿಲ್ಲಾಧಿಕಾರಿ ಕಚೇರಿ: 08194-220720
  • ಉಪವಿಭಾಗಾಧಿಕಾರಿ ಕಚೇರಿ: 08194-200342
  • ಮೊಳಕಾಲ್ಮೂರು ತಾಲ್ಲೂಕು: 08198-229234
  • ಚಳ್ಳಕೆರೆ ತಾಲ್ಲೂಕು: 08195-250648
  • ಚಿತ್ರದುರ್ಗ ತಾಲ್ಲೂಕು: 08914-222416
  • ಹಿರಿಯೂರು ತಾಲ್ಲೂಕು: 08193-263226
  • ಹೊಸದುರ್ಗ ತಾಲ್ಲೂಕು: 08199-230224

ಈ ಪ್ರಕ್ರಿಯೆಯ ಅವಧಿಯಲ್ಲಿ ಎಲ್ಲಾ ಪಕ್ಷಗಳ ಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಿ, ಎಲ್ಲಾ ಅರ್ಹ ಪದವೀಧರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಪೇಕ್ಷಿಸಿದ್ದಾರೆ.

WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories