ಕರ್ನಾಟಕ ಸರ್ಕಾರವು ರೈತರಿಗೆ ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸಲು “ಗಂಗಾ ಕಲ್ಯಾಣ ಯೋಜನೆ” ಅಡಿಯಲ್ಲಿ ₹4 ಲಕ್ಷ ಸಬ್ಸಿಡಿ ನೀಡುತ್ತಿದೆ. ಈ ಯೋಜನೆಯಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಜಮೀನಿನಲ್ಲಿ ಬೋರ್‌ವೆಲ್ ಕೊರೆಸಿಕೊಳ್ಳಲು ಆರ್ಥಿಕ ಸಹಾಯ ಪಡೆಯಬಹುದು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾರಿಗೆ ಅರ್ಹತೆ ಇದೆ?
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
- ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು (ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು).
- ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
- ಗ್ರಾಮೀಣ ಪ್ರದೇಶದ ರೈತರ ವಾರ್ಷಿಕ ಆದಾಯ ₹98,000 ಮತ್ತು ನಗರ ಪ್ರದೇಶದವರಿಗೆ ₹1.20 ಲಕ್ಷಕ್ಕಿಂತ ಕಡಿಮೆ ಇರಬೇಕು.
- ಯಾವುದೇ ಇತರ ನೀರಾವರಿ ಸೌಲಭ್ಯ (ಕಾಲುವೆ, ಬಾವಿ, ಇತ್ಯಾದಿ) ಇರಬಾರದು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
- ಆಧಾರ್ ಕಾರ್ಡ್ (ಮೂಲ ಮತ್ತು ಪ್ರತಿ)
- ಚಾಲ್ತಿ ಬ್ಯಾಂಕ್ ಖಾತೆ (ಆಧಾರ್ ಜೋಡಿಸಲಾದದ್ದು)
- ಬ್ಯಾಂಕ್ ಪಾಸ್‌ಬುಕ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಜಮೀನು ದಾಖಲೆ (ಪಟ್ಟೆ / ಖತಾ)
- ಪಾಸ್ಪೋರ್ಟ್ ಗಾತ್ರದ ಫೋಟೋ
- ಬಿಪಿಎಲ್ ರೇಷನ್ ಕಾರ್ಡ್ (ಇದ್ದರೆ)
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ
- ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in) ಗೆ ಲಾಗಿನ್ ಆಗಿ.
- ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಿ.
- ನಿಗಮಗಳ ವೆಬ್‌ಸೈಟ್ ಗಳಿಂದ ಹೆಚ್ಚಿನ ಮಾಹಿತಿ ಪಡೆಯಿರಿ:
- ಕರ್ನಾಟಕ ಅಲೆಮಾರಿ/ಅರೆ-ಅಲೆಮಾರಿ ಅಭಿವೃದ್ಧಿ ನಿಗಮ: www.kaad.karnataka.gov.in
- ಸವಿತಾ ಸಮಾಜ ಅಭಿವೃದ್ಧಿ ನಿಗಮ: www.kssd.karnataka.gov.in
- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: www.dbcdc.karnataka.gov.in
- ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: https://kvldcl.karnataka.gov.in
- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ: www.kmmd.karnataka.gov.in
ಸಹಾಯಕ್ಕಾಗಿ ಸಂಪರ್ಕಿಸಿ
- ಹೆಲ್ಪ್‌ಲೈನ್: 080-22374832, 8050770004, 8050770005
- ಕೊಡಗು ಜಿಲ್ಲಾ ವ್ಯವಸ್ಥಾಪಕರು: 08272-221656
ಈ ಸಬ್ಸಿಡಿ ಯೋಜನೆಯು ರೈತರಿಗೆ ನೀರಿನ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ. ಕೊನೆಯ ದಿನಾಂಕ ಜೂನ್ 30 ಆದ್ದರಿಂದ, ತಡಮಾಡದೆ ಅರ್ಜಿ ಸಲ್ಲಿಸಿ!
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- :10ನೇ ತರಗತಿ ಪಾಸ್ : ‘SSC’ಯಿಂದ 5293 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Police Constable Recruitment
- BREAKING : ರೆಪೊ ದರ 50 BPS ಕಡಿತ : 5.50% ಕ್ಕೆ ಇಳಿಸಿದ RBI , ಪ್ರತಿ ತಿಂಗಳು EMI ಕಟ್ಟುವವರಿಗೆ ಬಂಪರ್ ಗುಡ್ ನ್ಯೂಸ್ | Repo Rate DOWN
- ಮನೆ ಕರೆಂಟ್ ಬಿಲ್ 200 ಯುನಿಟ್ ಗಿಂತ ಹೆಚ್ಚಿಗೆ ಬರುತ್ತಿದೆಯಾ? ಈ 10 ಸಿಂಪಲ್ ಟಿಪ್ಸ್ ಫಾಲೋ ಮಾಡಿ ಹಣ ಉಳಿಸಿ!- Electricity Saving Tips
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




