Rain Alert: ದಾವಣಗೆರೆ ಸೇರಿ ವಿವಿಧ ಕಡೆ ತಂಪೆರೆದ ಮಳೆರಾಯ, ಏ.17 ರವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ .

davanagere rain

ಬಾರಿ ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಕರ್ನಾಟಕದಲ್ಲಿ ವರುಣನ ಆಗಮನ ಹಲವಾರು ಕಡೆ ಸಂತೋಷ ತಂದಿದೆ. ಹೌದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ತಣ್ಣನೆಯ ವಾತಾವರಣ ಜನತೆಗೆ ಖುಷಿ ತಂದಿದೆ. ದಾವಣಗೆರೆ ನಗರದಲ್ಲಿಯೂ ಇಂದು ವರ್ಷದ ಮೊದಲ ಮಳೆಯಾಗಿದ್ದು ಬೆಣ್ಣೆ ನಗರಿಗೆ ವರುಣ ತಂಪೆರದಿದ್ದಾನೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಂದು ಸಂಜೆ 4 ಗಂಟೆಯಿಂದಲೇ ನಗರದಲ್ಲಿ ಭಾರಿ ಮೋಡ ಆವರಿಸಿತ್ತು, ದಾವಣಗೆರೆ ಸೇರಿ ಹಲವು ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯಾಗಿದೆ. ಕಳೆದ ಒಂದು ವಾರದಿಂದ ಬಿಸಿಲಿನ ತಾಪಮಾನಕ್ಕೆ ಬೆಂದು ಹೋಗಿದ್ದ ಬೆಣ್ಣೆ ನಗರಿ ವರ್ಷದ ಮೊದಲ ಮಳೆಯಿಂದ ತುಸು ತಂಪಾಗಿದೆ.

WhatsApp Image 2024 04 12 at 8.42.40 PM

Karnataka weather Updates : ಕರ್ನಾಟಕ ಹವಾಮಾನ ವರದಿ

ರಾಜ್ಯದಲ್ಲಿ ಇಂದಿನಿಂದ ಏಪ್ರಿಲ್ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ರಾಜ್ಯದ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲು ಒಣಹವೇ ಮುಂದುವರೆಯಲಿದ್ದು ಏಪ್ರಿಲ್ 15 ನಂತರ  ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 12 ರಿಂದ ಏ 14 ರವರೆಗೆ ಮತ್ತು 17 ಮತ್ತು 18 ರಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಏ.12,15,16 ರಂದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾಗಗಳಲ್ಲಿ ಜೋರು ಮಳೆಯಾಗಲಿದೆ.

ಬೀದರ್, ಕಲಬುರ್ಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ , ಕೊಡಗು, ಚಿಕ್ಕಮಗಳೂರು. ಮೈಸೂರು. ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!