WhatsApp Image 2025 10 11 at 12.09.13 PM

Guest Lecturer: 2025-26ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ!

Categories:
WhatsApp Group Telegram Group

2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಅತಿಥಿ ಉಪನ್ಯಾಸಕರ ಹುದ್ದೆಗಳ ಸೇವೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ತಮ್ಮ ಆನ್ ಲೈನ್ ಅರ್ಜಿಯನ್ನು ಸಂಪಾದಿಸಲು (Edit ಮಾಡಲು) ಅವಕಾಶ ನೀಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳನ್ನು ಒಳಗೊಂಡು) 2025-26ನೇ ಶೈಕ್ಷಣಿಕ ಸಾಲಿನಲ್ಲಿ ಖಾಯಂ ಉಪನ್ಯಾಸಕರಿಗೆ ಬೋಧನಾ ಕಾರ್ಯಭಾರ ಹಂಚಿಕೆಯಾದ ನಂತರ ಉಳಿದಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ಹುದ್ದೆಗಳೂ ಸೇರಿದಂತೆ) ಆನ್ ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರ ಸೇವೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಆನ್ ಲೈನ್ ಅರ್ಜಿಯನ್ನು ತಿದ್ದುಪಡಿ ಮಾಡಲು ಅವಕಾಶ ನೀಡುವಂತೆ ಹಲವಾರು ಮನವಿಗಳು ಬಂದಿದ್ದವು. ಈ ಮನವಿಗಳನ್ನು ಪರಿಗಣಿಸಿ, ಈ ಕೆಳಕಂಡ ದಿನಾಂಕದೊಳಗೆ ಸದರಿ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅತಿಥಿ ಉಪನ್ಯಾಸಕರ ಸೇವೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಆನ್ ಲೈನ್ ಅರ್ಜಿಯನ್ನು ಸಂಪಾದಿಸಲು (Edit ಮಾಡಲು) ಇರುವ ಗಡುವನ್ನು ಅಕ್ಟೋಬರ್ 12 ರವರೆಗೆ ವಿಸ್ತರಿಸಲಾಗಿದೆ.

ಪ್ರಮುಖ ಸೂಚನೆಗಳು:

2025-26ನೇ ಸಾಲಿನ 1, 3, ಮತ್ತು 5ನೇ ಸೆಮಿಸ್ಟರ್‌ಗಳ ಕಾರ್ಯಭಾರದ ವಿವರಗಳನ್ನು ಪ್ರಾಂಶುಪಾಲರು EMIS ನಲ್ಲಿ ಅಪ್ಡೇಟ್ (UPDATE) ಮಾಡಬೇಕು.

2024-25ನೇ ಸಾಲಿನಲ್ಲಿ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ಅತಿಥಿ ಉಪನ್ಯಾಸಕರ ಮಾಹಿತಿಯನ್ನು ಪ್ರಾಂಶುಪಾಲರು EMIS ನಲ್ಲಿ ಆನ್‌ಬೋರ್ಡ್ (ONBOARD) ಮಾಡದೇ ಇರುವುದು ಇಲಾಖೆಯ ಗಮನಕ್ಕೆ ಬಂದಿದೆ. ಆದ್ದರಿಂದ, ಸಂಬಂಧಿಸಿದ ಪ್ರಾಂಶುಪಾಲರು ತಕ್ಷಣವೇ ಈ ಅತಿಥಿ ಉಪನ್ಯಾಸಕರ ಮಾಹಿತಿಯನ್ನು EMIS ನಲ್ಲಿ ಒದಗಿಸಲು ಅವಕಾಶ ನೀಡಲಾಗಿದೆ.

WhatsApp Image 2025 10 11 at 10.50.21 AM
WhatsApp Image 2025 10 11 at 10.50.21 AM 1 1
    WhatsApp Image 2025 09 05 at 11.51.16 AM 12

    ಈ ಮಾಹಿತಿಗಳನ್ನು ಓದಿ

    ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

     

    WhatsApp Group Join Now
    Telegram Group Join Now

    Popular Categories