ಪ್ರಮುಖ ಖಾಸಗಿ ಕಂಪನಿಯಿಂದ ವರ್ಷಕ್ಕೆ 60,000/- ಸ್ಕಾಲರ್ಶಿಪ್ ಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ – ಕಂಪ್ಲೀಟ್ ಮಾಹಿತಿ ಇಲ್ಲಿದೆ

u go scholarshio 2023

ಯುಗೋ (U-go) ವತಿಯಿಂದ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿ ವೇತನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಎಲ್ಲ ವಿದ್ಯಾರ್ಥಿಗಳಿಗೂ ಸಂತೋಷದ ಸುದ್ದಿ ಎಂದು ಹೇಳಬಹುದು. ಈ ವಿದ್ಯಾರ್ಥಿ ವೇತನವನ್ನು ಯಾರು ಯಾರು ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದಕ್ಕೆ ಬೇಕಾದ ದಾಖಲೆಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯುಗೊ (U-go) ಸ್ಕಾಲರ್ಶಿಪ್ 2023 : U-GO Scholarship 2023 : 

ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯರಿಗೆ ಆರ್ಥಿಕವಾಗಿ ಬೆಂಬಲವನ್ನು ನೀಡಲು, ವೃತ್ತಿಪರ ಪದವಿಯನ್ನು ಮಾಡುತ್ತಿರುವ ಯುವತಿಯರಿಗಾಗಿ ಸಹಾಯ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಉದಾಹರಣೆಗೆ ಶಿಕ್ಷಣ, ನರ್ಸಿಂಗ್, ಫಾರ್ಮಸಿ, ಮೆಡಿಕಲ್, ಇಂಜಿನಿಯರಿಂಗ್ ಹೀಗೆ ಹಲವಾರು ವೃತ್ತಿಪರ ಪದವಿ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ನಾಲ್ಕು ವರ್ಷದವರೆಗೂ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಉಪಯೋಗವಾಗಲಿ ಎಂದು ಈ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದಾರೆ. ಈ ವಿದ್ಯಾರ್ಥಿ ವೇತನವು ದೊರೆತರೆ ವಿದ್ಯಾರ್ಥಿನಿಯರು ತಮ್ಮ ಓದಿನ ಖರ್ಚುಗಳಾದ ಊಟ ವಸತಿ ಪುಸ್ತಕಗಳ ಹಾಗೂ ಲೇಖನಗಳ ಖರೀದಿಗೆ ಇತ್ಯಾದಿಗಳನ್ನು ಮಾಡಿಕೊಳ್ಳಬಹುದಾಗಿದೆ, ಅಲ್ಲದೆ ತಮ್ಮ ಬೋಧನಾ ಶುಲ್ಕವನ್ನು ಕೂಡ ಈ ವಿದ್ಯಾರ್ಥಿ ವೇತನದಿಂದ ಪೂರೈಸಕೊಳ್ಳಬಹುದಾಗಿದೆ.

ವಿದ್ಯಾರ್ಥಿ ವೇತನದ ಮೊತ್ತ : ವರ್ಷಕ್ಕೆ 60 ಸಾವಿರ ರೂಗಳು

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು:

 1. ವಿದ್ಯಾರ್ಥಿನಿಯರು ವೃತ್ತಿಪರ ಪದವಿಗಳನ್ನು ಮಾಡುತ್ತಿರಬೇಕು.
 2. ವಿದ್ಯಾರ್ಥಿನಿಯರು ಮೊದಲನೇ ವರ್ಷದ ಪದವಿಯಲ್ಲಿ ಓದುತ್ತಿರಬೇಕು.
 3.  ವಿದ್ಯಾರ್ಥಿನಿಯರು 10ನೇ ಹಾಗೂ 12ನೇ ತರಗತಿಯಲ್ಲಿ ಕನಿಷ್ಠವಾಗಿ 70% ಮಾರ್ಕ್ಸ್ಅನ್ನು ಗಳಿಸಿರಬೇಕು.
 4. ಕುಟುಂಬದ ಆದಾಯ ವರ್ಷಕ್ಕೆ 5 ಲಕ್ಷಕ್ಕಿಂತ ಕಡಿಮೆಯಲ್ಲಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ :
ಬೋಧನಾ ಶಿಕ್ಷಣ ಪದವಿಯನ್ನು (B.ed) ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ : ಎರಡು ವರ್ಷಕ್ಕೆ 80000 ರೂಗಳು. ನರ್ಸಿಂಗ್ ಹಾಗೂ ಫಾರ್ಮಸಿ ಕೋರ್ಸ್ ಗಳಿಗೆ  : ವರ್ಷಕ್ಕೆ 40,000 ದಂತೆ 4 ವರ್ಷಗಳು ದೊರೆಯುತ್ತದೆ
ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕೋರ್ಸ್ ಅನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ : ವರ್ಷಕ್ಕೆ 60 ಸಾವಿರ ರೂಗಳು ನಾಲ್ಕು ವರ್ಷಗಳ ಕಾಲ ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು :

 1. 12ನೇ ತರಗತಿಯ ಮಾರ್ಕ್ಸ್ ಶೀಟ್ ಹಾಗೂ ಉತ್ತೀರ್ಣವಾದ ದಾಖಲಾತಿಗಳು.
 2. ಸರ್ಕಾರದಿಂದ ಅಂಗೀಕೃತವಾದ ಆಧಾರ್ ಕಾರ್ಡ್/ ವೋಟರ್ ಐಡಿ/ ಡ್ರೈವಿಂಗ್ ಲೈಸೆನ್ಸ್ / ಪಾನ್ ಕಾರ್ಡ್
 3.  ಪ್ರಸ್ತುತ ವರ್ಷ ಕಾಲೇಜಿಗೆ ದಾಖಲಾದ ದಾಖಲಾತಿ ಪತ್ರ /ಐಡೆಂಟಿಟಿ ಕಾರ್ಡ್ / ಶುಲ್ಕ ರಸೀದಿ
 4. ಆದಾಯ ಪ್ರಮಾಣ ಪತ್ರ
 5.  ಬ್ಯಾಂಕಿನ ಪಾಸ್ ಬುಕ್ ಹಾಗೂ
 6.  ವಿದ್ಯಾರ್ಥಿನಿಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್ 19, 2023

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ಮಾಡುವ ವಿಧಾನ :
ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯ ಶೈಕ್ಷಣಿಕ ಅರ್ಹತೆ ಮತ್ತು ಅವರ ಆರ್ಥಿಕ ಪರಿಸ್ಥಿತಿಯನ್ನು ಆಧಾರವನ್ನಾಗಿಟ್ಟುಕೊಂಡು ಆಯ್ಕೆ ಮಾಡುತ್ತಾರೆ. ಇಷ್ಟೇ ಅಲ್ಲದೆ ಕೊನೆಯದಾಗಿ ವಿದ್ಯಾರ್ಥಿನಿಯ ದಾಖಲೆಗಳನ್ನು ಪರಿಶೀಲನೆ ಮಾಡಿದ ನಂತರ  ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ದೂರವಾಣಿ ಕರೆಗಳನ್ನು ಮಾಡಿ ಅದರಲ್ಲಿ ಸಂದರ್ಶನವನ್ನು ನಡೆಸುತ್ತಾರೆ. ಈ ಸಂದರ್ಶನವು ಕೇವಲ 10 ರಿಂದ 15 ನಿಮಿಷದಾಗಿರುತ್ತದೆ. ಹೀಗೆ ಆಯ್ಕೆಯ ಪ್ರಕ್ರಿಯೆ ಇರುತ್ತದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

 1.   ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
 2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
 3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
 4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
 5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
 6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
 7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
 8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ವಿದ್ಯಾರ್ಥಿಗಳಿಗೆ ತಮ್ಮ ಓದನ್ನು ಪೂರ್ಣಗೊಳಿಸಲು ಆರ್ಥಿಕವಾಗಿ ತೊಂದರೆಯಾಗುತ್ತಿದ್ದಲ್ಲಿ, ಇಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಬಹುಮುಖ್ಯವಾಗಿರುತ್ತದೆ.  ಅದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಕನಸನ್ನು ನೆರವೇರಿಸಿಕೊಳ್ಳಿ. ಹಾಗೆಯೇ ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!