ಕಾಂಗ್ರೆಸ್ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಿಂಗಳಿಗೆ ₹2,000 ನೆರವು ನೀಡುತ್ತಿದೆ. ಇತ್ತೀಚೆಗೆ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಹಣ ವಿತರಣೆ ತಡವಾಗುತ್ತಿದ್ದರೂ, ಸರ್ಕಾರವು ಶೀಘ್ರವೇ ಹಣವನ್ನು ಖಾತೆಗೆ ಜಮಾ ಮಾಡಲಿದೆ ಎಂದು ಖಚಿತಪಡಿಸಿದೆ. ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ಪರಿಶೀಲಿಸಲು ಇಲ್ಲಿ ಸುಲಭ ವಿಧಾನಗಳು, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
1. DBT ಕರ್ನಾಟಕ ಆಪ್‌ನ ಮೂಲಕ:
ಗೃಹಲಕ್ಷ್ಮಿ & ಅನ್ನಭಾಗ್ಯ DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ


2. ಮಾಹಿತಿ ಕಣಜ ವೆಬ್‌ಸೈಟ್‌ನ ಮೂಲಕ:
- mahitikanaja.karnataka.gov.in ಗೆ ಭೇಟಿ ನೀಡಿ.
- “ಟ್ರೆಂಡಿಂಗ್ ಸೇವೆಗಳು” ಅಡಿಯಲ್ಲಿ “ಗೃಹಲಕ್ಷ್ಮಿ ಅರ್ಜಿ ಸ್ಥಿತಿ” ಆಯ್ಕೆ ಮಾಡಿ.
- ನಿಮ್ಮ ಪಡಿತರ ಚೀಟಿ ಸಂಖ್ಯೆ ನಮೂದಿಸಿ.
- “ಸಬ್‌ಮಿಟ್” ಕ್ಲಿಕ್ ಮಾಡಿ ಹಣದ ವಿವರಗಳನ್ನು ಪಡೆಯಿರಿ.
ಹಣ ಬರದಿದ್ದರೆ ಏನು ಮಾಡಬೇಕು?
ಸಿಡಿಪಿಒ (CDPO) ಕಚೇರಿಗೆ ಭೇಟಿ ನೀಡಿ: ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ವಿವರ, ರೇಷನ್ ಕಾರ್ಡ್ ಮತ್ತು ಆಧಾರ್-ಲಿಂಕ್ ಮೊಬೈಲ್ ನಂಬರ್ ತೆಗೆದುಕೊಂಡು ಹೋಗಿ.
ತಾಂತ್ರಿಕ ಸಮಸ್ಯೆಗಳು: NPCI FAILURE ಅಥವಾ E-KYC ದೋಷಗಳಿದ್ದರೆ, ಅಧಿಕಾರಿಗಳನ್ನು ಸಂಪರ್ಕಿಸಿ.
ಸಹಾಯಕ್ಕಾಗಿ ಸಂಪರ್ಕಿಸಿ:
- ಟೋಲ್-ಫ್ರೀ ನಂಬರ್: 190700192216
- ಇತರೆ ಸಂಖ್ಯೆಗಳು: 080-22279954, +91-8792662814, +91-8792662816
- ಸೇವಾ ಕೇಂದ್ರಗಳು: ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.