Home » ವಿದ್ಯಾರ್ಥಿ ವೇತನ » ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

Picsart 23 06 12 11 36 56 798 scaled

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ವತಿಯಿಂದ ಪ್ರೋತ್ಸಾಹ ಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಯಾವ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನ ಸಿಗಲಿದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಬೇಕಾಗುತ್ತದೆ?, ಎಷ್ಟು ಪ್ರೋತ್ಸಾಹ ಧನ ಸಿಗಲಿದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ:

WhatsApp Image 2023 06 12 at 10.56.34 AM

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ರಿ.) ವತಿಯಿಂದ 2022- 23ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ(Incentive money)ವನ್ನು ನೀಡಲಾಗುತ್ತಿದೆ. ಹೆಚ್ಚು ಅಂಕವನ್ನು ಗಳಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರೋತ್ಸಾಹ ಧನವನ್ನು ನೀಡಿ ಪುರಸ್ಕರಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವನ್ನು ನೀಡುವುದರ ಮೂಲಕ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲಿದೆ ಎಂಬುದು ಈ ಪ್ರೋತ್ಸಾಹ ಧನದ ಉದ್ದೇಶವಾಗಿದೆ. ಪ್ರತಿಭಾವಂತ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ನೆರವಿಗೆ ಸಹಕರಿಸಬೇಕೆಂದು ಮಹಾಸಭೆಯು ಆಶಿಸುತ್ತದೆ. ಈ ಪ್ರೋತ್ಸಾಹ ಧನದ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

Untitled 1 scaled

ಪ್ರೋತ್ಸಾಹ ಧನವನ್ನು ನೀಡುವ ಸಂಸ್ಥೆಯ ಹೆಸರು : ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ
ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್

ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :

ಹತ್ತನೇ ಹಾಗೂ 12ನೇ ತರಗತಿಯನ್ನು ಪಾಸಾಗಿರಬೇಕು
ಹತ್ತನೇ ಹಾಗೂ 12ನೇ ತರಗತಿಯಲ್ಲಿ ಕನಿಷ್ಠ 90 ಕಿಂತ ಹೆಚ್ಚು ಅಂಕಗಳನ್ನು ಗಳಿಸಬೇಕು.

ಪ್ರೋತ್ಸಾಹ ಧನ ಎಷ್ಟು ದೊರೆಯುತ್ತದೆ?:

ಅಧಿಕೃತ ಸೂಚನೆಯಲ್ಲಿ ಪ್ರೋತ್ಸಾಹ ಧನದ ಮೊತ್ತವನ್ನು ನಮೂದಿಸಲಾಗಿಲ್ಲ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀವು ಕೆಳಗಿನ ವಿಳಾಸದಲ್ಲಿ ತಿಳಿಯಬಹುದಾಗಿದೆ:

ನಂ.17/4, ‘ವೀರಶೈವ-ಲಿಂಗಾಯತ ಧವನ’, ರಮಣಮಹರ್ಷಿ ರಸ್ತೆ,
ಸದಾಶಿವನಗರ,
ಬೆಂಗಳೂರು-560 080

ದೂರವಾಣಿ ಸಂಖ್ಯೆ: 080-23602177 e-mail:[email protected] www.veerashaivamahasabha.org

ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ದಾಖಲೆಗಳು :

ಅಂಕಪಟ್ಟಿ
ಇತ್ತೀಚಿನ ಭಾವಚಿತ್ರ
ಆಧಾರ್ ಕಾರ್ಡ್ ಹಾಗೂ
ಜಾತಿ ಪ್ರಮಾಣ ಪತ್ರ

telee

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸಬೇಕು ಅದಕ್ಕಾಗಿ ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ

ಹಂತ 2: ನೋಂದಣಿಯನ್ನು ಮಾಡಿಕೊಂಡು, ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ

ಹಂತ 3: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು

ಹಂತ 4: ಕೊನೆಯದಾಗಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡುವ ಮೂಲಕ ಪ್ರೋತ್ಸಾಹ ಧನಕ್ಕೆ ಅರ್ಜಿಯನ್ನು ಸಲ್ಲಿಸಿ.

ಈ ಪ್ರೋತ್ಸಾಹ ಧನಕ್ಕೆ ಮೇಲಿನ ವಿವರಗಳಂತೆ ಅರ್ಜಿಯನ್ನು ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವನ್ನು ತೆಗೆದುಕೊಳ್ಳಲು ಈ ಪ್ರೋತ್ಸಾಹ ಧನದ ಪ್ರಯೋಜನವನ್ನು ಪಡೆದುಕೊಳ್ಳಿ. ಹಾಗೆಯೇ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

About

Lingaraj Ramapur BCA, MCA, MA ( Journalism )

One thought on “ಪಿಯುಸಿ ಪಾಸಾದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *