15,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : Vidyasiri Scholarship 2022

Vidyasiri Scholarship Karnataka 2022: ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ‘ವಿದ್ಯಾಸಿರಿ’,ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ‘ವಿದ್ಯಾಸಿರಿ’ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾ ವೇತನ ಯಾವ ತರಗತಿಯವರಿಗೆ ದೊರೆಯುತ್ತದೆ? ಈ ವಿದ್ಯಾ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ವಿದ್ಯಾರ್ಥಿ ವೇತನದ ಮೊತ್ತ ಎಷ್ಟು? ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಸರ್ಕಾರಿ, ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಸಿಗದಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ‘ವಿದ್ಯಾಸಿರಿ’ ಯೋಜನೆ ಜಾರಿ ಮಾಡಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ. 1,500/- ರಂತೆ, ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು (ಜೂನ್-2022 ರಿಂದ ಮಾರ್ಚ್-2023 ರವರೆಗೆ) ಅವರ ಬ್ಯಾಂಕ್ ಖಾತೆಗೆ, ಆನ್‌ಲೈನ್ ಮೂಲಕ ಜಮಾ ಮಾಡಲಾಗುತ್ತದೆ.

ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆಯಾಗಿದ್ದು ನೀವು ಡಿಸೆಂಬರ್ 31 ರ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ಇದುವರೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಿಲ್ಲವೋ ಅವರು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ವಿದ್ಯಾಸಿರಿ ವಿದ್ಯಾರ್ಥಿವೇತನದ ವಿವರಗಳು:

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು,  ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1.  ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  2. ಅಭ್ಯರ್ಥಿಯು ಹಿಂದುಳಿದ ವರ್ಗದ ವರ್ಗಕ್ಕೆ ಸೇರಿರಬೇಕು ಮತ್ತು ಪುರಾವೆಯಾಗಿ ಮಾನ್ಯವಾದ ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು. SC ST OBC EBC ಯಂತಹ ಮೀಸಲು ವರ್ಗಕ್ಕೆ ಸೇರಿದವರಾಗಿರಬೇಕು.
  3. 2A, 3A, ಮತ್ತು 3B ಯೋಜನೆಗಳ OBC EBC ಅಡಿಯಲ್ಲಿ ಅಭ್ಯರ್ಥಿಗಳ ವಾರ್ಷಿಕ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ INR 1,00,000 ಮೀರಬಾರದು. ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ಆದಾಯವು ಎಲ್ಲಾ ಮೂಲಗಳಿಂದ ರೂ.2.50 ಲಕ್ಷ ಮೀರಬಾರದು
  4. ಕರ್ನಾಟಕದಲ್ಲಿ ಕನಿಷ್ಠ 7 ವರ್ಷ ಓದಿರಬೇಕು. ಕಾಲೇಜಿನಲ್ಲಿ ಕನಿಷ್ಠ 75% ಹಾಜರಾತಿಯನ್ನು ಹೊಂದಿರಬೇಕು.
  5. ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
    ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ – ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾಗಿರಬೇಕು
  6. ವಿದ್ಯಾರ್ಥಿಗಳು. ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ, ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.telee
  7. ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ಹಾಗೂ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುವ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ- ಊಟ ಮತ್ತು ವಸತಿ ಕಾರ್ಯಕ್ರಮದಲ್ಲಿ ಮಂಜೂರಾತಿ ನೀಡಲಾಗುವುದು.
  8. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿರಬೇಕು ಹಾಗೂ ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು. ಆದರೆ, ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ/ಪಟ್ಟಣ ಆಗಿದ್ದು, ಅವರು ಬೇರೆ ನಗರ/ಪಟ್ಟಣದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ, ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.
  9. ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.(ಉದಾ: ಬಿ.ಎ ನಂತರ ಬಿ.ಕಾಂ, ಎಂ.ಎ (ಕನ್ನಡ) ನಂತರ ಎಂ.ಎ (ಇಂಗ್ಲೀಷ್), ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ)

ವಿದ್ಯಾ ವೇತನದ ಮೊತ್ತ :

ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ.1500/-ರಂತೆ, ಶೈಕ್ಷಣಿಕ ಅವಧಿಯಲ್ಲಿ ಪ್ರತಿ ವರ್ಷ 10 ತಿಂಗಳಿಗೆ ಒಟ್ಟು ರೂ.15,000/- ಸಹಾಯಧನವನ್ನು, ಇತರೆ ನಿಬಂಧನೆಗಳಿಗೊಳಪಟ್ಟು, ವಿದ್ಯಾರ್ಥಿಗಳು ಯಾವುದಾದರೂ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಇರುವ ಬ್ಯಾಂಕಿನಲ್ಲಿ ತೆರೆದಿರುವ ಬ್ಯಾಂಕ್ ಖಾತೆಗೆ, ಆನ್‍ಲೈನ್ ಮೂಲಕ ಜಮಾ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

  1. ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
  2. ಪಿಯುಸಿ / ಪದವಿ ಸೆಮಿಸ್ಟರ್ ಅಂಕಪಟ್ಟಿ.
  3. ಆಧಾರ್ ಕಾರ್ಡ್‌.
  4. ಬ್ಯಾಂಕ್ ಪಾಸ್‌ ಬುಕ್‌ ಪ್ರತಿ.
  5. ಜಾತಿ ಪ್ರಮಾಣ ಪತ್ರ.
  6. ಆದಾಯ ಪ್ರಮಾಣ ಪತ್ರ.
  7. ಪಾಸ್‌ ಪೋರ್ಟ್‌ ಅಳತೆಯ ಭಾವಚಿತ್ರ.
  8. ಶಾಲಾ ಶುಲ್ಕದ ರಶೀದಿ.
  9. ನಿವಾಸಿ ದೃಢೀಕರಣ ಪತ್ರ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್​ 31, 2022

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಅರ್ಜಿ ಸಲ್ಲಿಸುವ ವಿಧಾನ :

ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹರಾದವರು, ಆನ್‍ಲೈನ್ ಮೂಲಕ SSP ತಂತ್ರಾಂಶದಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಒಂದು ಸಾರಿ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನದ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಹಂತ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ssp.karnataka.gov.in ಗೆ ಭೇಟಿ ನೀಡಿ.
ಹಂತ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಖಾತೆಯನ್ನು ರಚಿಸುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಂತ 3:ನಿಮ್ಮ ಆಧಾರ್ ಸಂಖ್ಯೆ ಮತ್ತು ನಿಮ್ಮ ಹೆಸರು ಆಧಾರ್ ನಲ್ಲಿರುವಂತೆ ಇಲ್ಲಿ ನಮೂದಿಸಿ, ಲಿಂಗವನ್ನು    ಆಯ್ಕೆ ಮಾಡಿ, ಕ್ಯಾಪ್ಚಾ ಕೊಡನ್ನು ನಮೂದಿಸಿ ಅರ್ಜಿಯನ್ನು ಮುಂದುವರಿಸಿ
ಹಂತ 4: ನಿಮ್ಮ ಪಾಲಕ ಅಥವಾ ಪೋಷಕರ ಆಧಾರ್ ಸಂಖ್ಯೆಯನ್ನು ನಮೂದಿಸಿ ಮೊಬೈಲ್ ನಂಬರನ್ನು ಭರ್ತಿ ಮಾಡಿ ಮತ್ತು ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ನಂತರ ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ಒಟಿಪಿ ಪಡೆಯುತ್ತೀರಿ.
ಹಂತ 5: ನಂತರ ಅರ್ಜಿದಾರರು ಬಳಕೆದಾರ ID ಮತ್ತು ಪಾಸ್‌ವರ್ಡ್ ಅನ್ನು ಪಡೆಯುತ್ತೀರಿ. ಅದನ್ನು ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.

ಕರ್ನಾಟಕ ಎಸ್‌ಎಸ್‌ಪಿ ವೆಬ್‌ಸೈಟ್‌ಗೆ ಲಾಗಿನ್ ಮಾಡುವುದು ಹೇಗೆ?

ಅರ್ಜಿದಾರರು ನೀವು ಪಡೆದುಕೊಂಡಿರುವ ಬಳಕೆದಾರ ID ಮತ್ತು ಪಾಸ್‌ವರ್ಡ್‌ನೊಂದಿಗೆ ಅಧಿಕೃತ ವೆಬ್‌ಸೈಟ್‌ಗೆ ಲಾಗ್ ಇನ್ ಮಾಡಬಹುದು. ನಂತರ ವಿದ್ಯಾರ್ಥಿ ಖಾತೆಯ ಮುಖಪುಟಕ್ಕೆ ಪ್ರವೇಶ ಪಡೆಯುತ್ತೀರಿ.  ಆ ಮುಖಪುಟದಲ್ಲಿ ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ವಿವರಗಳಾದ ಆಧಾರ್ ಸಂಖ್ಯೆ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಮತ್ತು NSP ID, FRUIT ID, KUTUMB ID ಯನ್ನು ಭರ್ತಿ ಮಾಡಬೇಕಾಗುತ್ತದೆ. ಎಲ್ಲಾ ಅಗತ್ಯ ವಿವರಗಳನ್ನು ಪರಿಶೀಲಿಸಿದ ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು ಮತ್ತು ನಂತರ ಅದನ್ನು ಸ್ವೀಕೃತಿ ಚೀಟಿಯೊಂದಿಗೆ ಶಾಲೆಗೆ ಅಥವಾ ಕಾಲೇಜಿಗೆ ಸಲ್ಲಿಸಬೇಕು.

ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳ ಪಟ್ಟಿ 2022-23 ವೀಕ್ಷಿಸುವುದ ಹೇಗೆ ?

ಎಸ್‌ಎಸ್‌ಪಿ ಅಧಿಕೃತ ವೆಬ್‌ಸೈಟ್ ನಲ್ಲಿ ವಿದ್ಯಾರ್ಥಿವೇತನ ಪಡೆಯಲು ಅರ್ಹತೆ ಪಡೆದ ವಿದ್ಯಾರ್ಥಿಗಳ ಸಂಪೂರ್ಣ ಪಟ್ಟಿಯನ್ನು ನೀಡಲಾಗಿರುತ್ತದೆ

ಹಂತ1: ಎಸ್‌ಎಸ್‌ಪಿ ಕರ್ನಾಟಕ ವಿದ್ಯಾರ್ಥಿವೇತನದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
ಹಂತ 2: ಲಾಗಿನ್ ಆಗಿ.
ನಂತರ ಸಂರ್ಪೂರ್ಣ ವಿವರ ನಿಮ್ಮ ಪರದೆಯ ಮೇಲೆ ಮೂಡಲಿದೆ.

ಈ ಎಸ್ ಎಸ್ ಪಿ ವಿದ್ಯಾಭ್ಯಾಸನಕ್ಕೆ ಅರ್ಜಿ ಸಲ್ಲಿಸುವುದರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ. ಇದಲ್ಲದೆ ಪೋಷಕರಿಗೂ ಕೂಡ ವಿದ್ಯಾರ್ಥಿಗಳಿಗೆ ಹಣವನ್ನು ಕೊಡುವ ಸಮಸ್ಯೆ ಇರುವುದಿಲ್ಲ. ಹಾಗಾಗಿ ತುಂಬಾ ಅನುಕೂಲವಿರುವಂತಹ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಪೋಷಕ ಬಾಂಧವರಿಗೂ ಶೇರ್ ಮಾಡಿ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

telee

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

 

WhatsApp Group Join Now
Telegram Group Join Now

Related Posts

5 thoughts on “15,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ : Vidyasiri Scholarship 2022

Leave a Reply

Your email address will not be published. Required fields are marked *

error: Content is protected !!