ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ದೊಡ್ಡ ಬದಲಾವಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

Picsart 23 12 20 16 58 52 151 scaled

ಇದೀಗ ರಾಜ್ಯ ಸರ್ಕಾರದಿಂದ ಬಂದ ಮಾಹಿತಿಯ ಪ್ರಕಾರ ಗ್ರಾಮ ಆಡಳಿತಾಧಿಕಾರಿಯ ( Village Administrative officer )  ನೇಮಕಾತಿಯ ವಿಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಆ ಬದಲಾವಣೆ ಏನು ? ಅದರ ಬಗ್ಗೆ ನೀಡಿರುವ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 

ಗ್ರಾಮ ಲೆಕ್ಕಾಧಿಕಾರಿ ನೇಮಕಾತಿಯಲ್ಲಿ ಬದಲಾವಣೆ :

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಆಡಳಿತಾಧಿಕಾರಿ (ವಿಲೇಜ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ) ಹುದ್ದೆಗಳ ಭರ್ತಿಯ ವಿಧಾನದಲ್ಲಿ ಮಹತ್ವದ ಬದಲಾವಣೆ ತಂದಿದೆ. ಕಳೆದ ವಾರ ಸಚಿವ ಸಂಪುಟಸಭೆಯಲ್ಲಿ ಇದರ ಬಗ್ಗೆ ಚರ್ಚೆಯಾಗಿದೆ. ಮೊದಲ ಹಂತದಲ್ಲಿ 750 ಹುದ್ದೆಗಳ ಭರ್ತಿ ಕಾರ್ಯ ಆದಷ್ಟು ಬೇಗ ಆರಂಭಿಸಲಾಗುತ್ತಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ( Competative exam ) ನಡೆಸಿ ಆಯ್ಕೆ :

ಈ ಹಿಂದೆ ಗ್ರಾಮದ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳನ್ನು ಶಾರ್ಟ್‌ ಲಿಸ್ಟ್‌ ( Short List ) ಮಾಡಿ ನೇಮಕ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಮಾಡಲಾಗುತ್ತಿತ್ತು. ಆದರೆ ಇನ್ನುಮುಂದೆ ಈ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು ಎಂದು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ.

tel share transformed

750 ಹುದ್ದೆಗಳಿಗಳನ್ನು ಭರ್ತಿ ಮಾಡಲು ನಿರ್ಧಾರ :

ಇನ್ನು ನೋಡುವುದಾದರೆ ಕರ್ನಾಟಕ ರಾಜ್ಯದಲ್ಲಿ 9000 ಗ್ರಾಮ ಆಡಳಿತಾಧಿಕಾರಿಗಳಿದ್ದಾರೆ. ಅದನ್ನು ಹೊರತು ಪಡಿಸಿ ಇನ್ನೂ 1500 ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಉಳಿದಿವೆ.

ಹಾಗಾಗಿ ಮೊದಲ ಹಂತದಲ್ಲಿ 750 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕಂದಾಯ ಇಲಾಖೆ ನಿರ್ಧರಿಸಿದೆ. ಈಗಾಗಲೇ ಸರ್ಕಾರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ರಾಜ್ಯದ ಅಧಿಕೃತ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಾಧಿಕಾರಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ಸ್ಪರ್ಧಾತ್ಮಕ ಪರೀಕ್ಷೆ ನಂತರ ಮೆರಿಟ್‌ ಪಟ್ಟಿಯನ್ನು ಜಿಲ್ಲಾವಾರು ಆಯ್ಕೆ ಪ್ರಾಧಿಕಾರ ಬಿಡುಗಡೆ ಮಾಡಲಿವೆ. ಈ ಪಟ್ಟಿಯಲ್ಲಿನ ಅಭ್ಯರ್ಥಿಗಳು ಗರಿಷ್ಠ ಅಂಕಗಳ ಆಧಾರದಲ್ಲಿ ಕೌನ್ಸಿಲಿಂಗ್ ಮೂಲಕ ಸ್ಥಳವನ್ನು ತಿಳಿಸುತ್ತಾರೆ. ಮೀಸಲಾತಿಗೆ ಅನುಗುಣವಾಗಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತದೆ.

ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ :

ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಗೆಜೆಟ್ ಅಧಿಸೂಚನೆಯಲ್ಲಿ , ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14)ರ (ಕರ್ನಾಟಕ ಅಧಿನಿಯಮ 14) ಕಲಮು 3ರ ಉಪ-ಕಲಮು (1)ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಕರ್ನಾಟಕ ಸರ್ಕಾರವು ಉದ್ದೇಶಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳ (ಕಂದಾಯ ಅಧೀನ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 1977ಕ್ಕೆ ತಿದ್ದುಪಡಿ ತರಲು ಉದ್ದೇಶಿಸಿರುವ ಈ ಕೆಳಗಿನ ನಿಯಮಗಳ ಕರಡನ್ನು ಕಲಮು (1)ರ ಪ್ರಕಾರ ಪ್ರಕಟಿಸಲಾಗಿದೆ.

Picsart 23 12 20 16 49 16 193

ಸದರಿ ಅಧಿನಿಯಮದ 3ನೇ ಪ್ರಕರಣದ ಉಪ-ಕಲಮು (2)ರ ಪ್ರಕಾರ, ಎಲ್ಲ ವ್ಯಕ್ತಿಗಳ ಮಾಹಿತಿಗಾಗಿ ಮತ್ತು ಸದರಿ ಕರಡನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

Picsart 23 12 20 16 50 57 725

ಸಲಹೆ ಮತ್ತು ಆಕ್ಷೇಪಣೆ ನೀಡಲು ಅವಕಾಶ :

ಹಾಗೆಯೇ ಅವಧಿ ಮುಗಿಯುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣನೆಗೆ ತೆಗೆದುಕೊಳ್ಳುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಬಹುದು:

ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು-560 001.

whatss

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!