ರಾಜ್ಯ ಸರ್ಕಾರದಿಂದ ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

subsidy for womens self employment

ಮಹಿಳೆಯರಿಗೆ ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರದಿಂದ ( State Government ) ಮಹಿಳೆಯರು ಸ್ವಯಂ ಉದ್ಯೋಗ(women’s self employment) ಮಾಡಲು ಮತ್ತು ತಮ್ಮ ಕಾಲಿನ ಮೇಲೆ ತಾವು ನಿಂತು ಕೊಳ್ಳಲು ಹಾಗೂ ತಮ್ಮ ಜೀವನದ ಆರ್ಥಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಅವರಿಗೆ ಸಹಾಯ ಧನ ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ( Department of Women and Child Development ) ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ (Empowerment of Persons with Disabilities and Senior Citizens ) ಪ್ರಕಟಣೆ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿರುದ್ಯೋಗಿ ಮಹಿಳೆಯರಿಗೆ ಶುಭ ಸುದ್ದಿ :

new subsidy schemes

ಈಗಾಗಲೇ 2023 – 24 ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ಇರುವ ಆಸಕ್ತ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಮತ್ತು ಅವರ ಜೀವನಕ್ಕಾಗಿ ಸರ್ಕಾರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಹಾಯಧನ ಪಡೆದುಕೊಳ್ಳಲು ಮಹಿಳೆಯರು ಆದಷ್ಟು ಬೇಗ ಅರ್ಜಿ ಸಲ್ಲಿಸಬಹುದು.

ಈ ಒಂದು ಸಹಾಯಧನ ಯೋಜನೆ(subsidy schemes)ಗಳ ಅಡಿಯಲ್ಲಿ ಇನ್ನು ಹಲವು ಯೋಜನೆಗಳು ಇವೆ. ಅವುಗಳೆಂದರೆ :

ಉದ್ಯೋಗಿನಿ ಯೋಜನೆ :

ಈ ಒಂದು ಯೋಜನೆಯಲ್ಲಿ ಮಹಿಳೆಯರು ಆದಾಯ ಬರುವ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅವರು ಸ್ವಂತ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ(loan through bank)ದ ರೂಪದಲ್ಲಿ ಸಹಾಯಧನ ನೀಡಲಾಗುತ್ತದೆ. ಹಾಗೆಯೇ ಈ ಯೋಜನೆಗೆ.ಅರ್ಜಿ ಸಲ್ಲಿಸುವವರ ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಯೋಜನೆಯಲ್ಲಿ ಪರಿಶಿಷ್ಟ ಜಾತಿ ( SC ) ಮತ್ತು ಪರಿಶಿಷ್ಟ ಪಂಗಡದ ( ST ) ಫಲಾನುಭವಿಗಳಿಗೆ ಮತ್ತು ಸಾಮಾನ್ಯ ವರ್ಗದವರಿಗೆ ಬೇರೆ ಬೇರೆ ರೀತಿಯ ಸಹಾಯಧನ ಇದೆ. ಅವುಗಳೆಂದರೆ :

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ:
ಆದಾಯ ಮಿತಿ : 2.00 ಲಕ್ಷ ರೂಪಾಯಿಗಳು
ಘಟಕ ವೆಚ್ಚ : ಕನಿಷ್ಟ ರೂ 1.00 ಲಕ್ಷದಿಂದ ಗರಿಷ್ಟ ರೂ. 3.00 ರೂಪಾಯಿಗಳು
ಸಹಾಯಧನ ಶೇ. 50 ರಷ್ಟು

ಸಾಮಾನ್ಯ ವರ್ಗದ ( OBC ) ಫಲಾನುಭವಿಗಳಿಗೆ :
ಆದಾಯ ಮಿತಿ : 1.50 ಲಕ್ಷ ರೂಪಾಯಿಗಳು
ಘಟಕ ವೆಚ್ಚ : ಗರಿಷ್ಟ ರೂ. 3.00 ಲಕ್ಷ ರೂಪಾಯಿಗಳು
ಸಹಾಯಧನ: ಶೇ.30 ರಷ್ಟು

ಚೇತನ ಯೋಜನೆ :

ಎರಡನೆಯದಾಗಿ ಚೇತನ ಯೋಜನೆ ಅಡಿಯಲ್ಲಿ ದಮನಿತ ಮಹಿಳೆಯರಿಗೆ ಅವರ ಚಟುವಟಿಕೆಗೆ ಬೇಕಾದ ಆರ್ಥಿಕ ಸಹಾಯವನ್ನು 30,000 ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಈ ಯೋಜನೆಗೆ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು.

ಧನಶ್ರೀ ಯೋಜನೆ :

ಈ ಒಂದು ಯೋಜನೆಗೆ ಮಹಿಳೆಯರಿಗೆ ಸ್ವಯಂ ಉದ್ಯೋಗವನ್ನು ಮಾಡಲು 30,000 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ. ಹಾಗೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯ ವಯೋಮಿತಿ 18 ರಿಂದ 60 ವರ್ಷಗಳಿರಬೇಕು.

ಪುನರ್ವಸತಿ ಯೋಜನೆ

ಹಾಗೆಯೇ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ವತಿಯಿಂದ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಕೂಡ 30,000 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಈ ಯೋಜನಗೆ ಅರ್ಜಿ ಸಲ್ಲಿಸಲು ಇರುವ ದಿನಾಂಕಗಳ ವಿವರ :

ಮೇಲಿನ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವವರು 22-11-2023ರಿಂದ ಕೊನೆಯ ದಿನಾಂಕ 22-12-2023ರವೊಳಗೆ ಇರುತ್ತದೆ. ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕು.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಮತ್ತು ಅರ್ಜಿ ಸಲ್ಲಿಸುವ ವಿವರ :

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್‌ ಮಾಡಿಸಿರಬೇಕು.

ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು / ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು.

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!